ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ 75 ನೆಯ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯ ದಾಸ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಮತ್ತು ಶಾಲೆಯ ಪ್ರಾಂಶುಪಾಲರಾದ ಶೋಭಾ ಕಿಶೋರ್ ರವರು ದೇಶದ ಅಭಿವೃದ್ಧಿ ಮತ್ತು ಹಿತಕ್ಕಾಗಿ ನಾವೆಲ್ಲರೂ ಬದ್ಧರಾಗಬೇಕೆಂದು ತಿಳಿಸಿದರುಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳು ನಮ್ಮ ದೇಶ ವಿಕಸಿತ ಭಾರತ ಎಂಬ ಸಂದೇಶವನ್ನು ನೃತ್ಯ ಮತ್ತು ಗಾನದ ಮೂಲಕ ಪ್ರದರ್ಶಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯದಾಸ್, ಲೀಲಾವತಿ ರುಕ್ಮಯ್ಯದಾಸ್, ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರು, ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.