ಅರಂತೋಡು ಕಂಟೈನರ್ ಲಾರಿ ಪಲ್ಟಿ – ಚಾಲಕನಿಗೆ ಗಾಯ

0

ಮಂಗಳೂರಿನಿಂದ ಮಡಿಕೇರಿ ಕಡೆಗೆ ಟೈಲ್ಸ್ ತುಂಬಿಕೊಂಡು ತೆರಳುತ್ತಿದ್ದ ಕಂಟೈನರ್ ಲಾರಿ ಅರಂತೋಡಿನ ಟಿ.ಎಂ.ಶಹೀದ್ ಅವರ ಮನೆ ಸಮೀಪದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಬೆಳಿಗ್ಗಿನ ಜಾವ ಸಂಭವಿಸಿದೆ.

ಚಾಲಕನಿಗೆ ಗಾಯವಾಗಿದ್ದು ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಕಲ್ಲುಗುಂಡಿ ಹೊರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.