ಕರ್ನಾಟಕದ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

0

ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಇಂದು ದಿನಾಂಕವನ್ನು ಪ್ರಕಟಿಸಿದೆ.ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ಕೂಡ ನಡೆಯಲಿದೆ.
ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಜಿ.ಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಾಸೀರ್ ಹುಸೇನ್, ರಾಜೀವ್ ಚಂದ್ರಶೇಖರ್ ಅವರ ಅವಧಿ ಅಂತ್ಯವಾಗಲಿದೆ.


ಚುನಾವಣಾ ಆಯೋಗದ ಪ್ರಕಾರ, ರಾಜ್ಯಸಭಾ ಚುನಾವಣೆಗೆ ಫೆ.8ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಫೆ.15 ಕೊನೆಯ ದಿನವಾಗಿದೆ. ಫೆ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಫೆ.20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಫೆಬ್ರವರಿ 27 ರಂದು ಬೆಳಗ್ಗೆ 9 ರಿಂದ ಸಂಜೆ 4 ರ ನಡುವೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ.