ಸುಳ್ಯ ಸಹಕಾರ ಭಾರತಿ ಆಶ್ರಯದಲ್ಲಿ ತಾಲೂಕು ಮಟ್ಟದ ಚಿಂತನ ಮಂಥನ ಕಾರ್ಯಕ್ರಮ

0

ಸುಳ್ಯ ಸಹಕಾರ ಭಾರತಿ ಆಶ್ರಯದಲ್ಲಿ ತಾಲೂಕು ಮಟ್ಟದ ಚಿಂತನ ಮಂಥನ ಕಾರ್ಯಕ್ರಮ ಜ. 30ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಸಹಕಾರ ಭಾರತಿ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಆಯೋಜಿಸಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಸಹಕಾರ ಭಾರತಿ ಅಧ್ಯಕ್ಷ ಹಾಗೂ ಕಳಂಜ‌ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ.‌ಕೂಸಪ್ಪ ಗೌಡ ಮುಗುಪ್ಪು ವಹಿಸಿದ್ದರು.

ಪಂಜ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಸುಧಾಕರ ರೈ, ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ತಾಲೂಕು ಕಾರ್ಯದರ್ಶಿ ಭಾಸ್ಕರ ರಾವ್, ಸಂಘದ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂ. ಕೂಸಪ್ಪ ಗೌಡ ಮುಗುಪ್ಪು ಸ್ವಾಗತಿಸಿದರು. ಜಿಲ್ಲಾ ಕೋಶಾಧಿಕಾರಿ ಹಾಗೂ ಸುಳ್ಯ ತಾಲೂಕು ಪ್ರಭಾರಿ ಸುಬ್ರಹ್ಮಣ್ಯ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಅಜಿತ್ ರಾವ್ ಕಿಲಂಗೋಡಿ ಕಾರ್ಯಕ್ರಮ ನಿರೂಪಿಸಿದರು.

ಹಿರಿಯ ಸಹಕಾರಿಗಳಾದ ರಾಧಾಕೃಷ್ಣ ಕೋಟೆ ಮತ್ತು ಪ್ರಸನ್ನ ಎಣ್ಮೂರುರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಹಕಾರ ಭಾರತಿ ಆಶ್ರಯದಲ್ಲಿರುವ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ನಿರ್ದೇಶಕರು ಮತ್ತು ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.