ಜಾಲ್ಸೂರು ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0

ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ12ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಜ‌.29ರಂದು ನಡೆಯಿತು.


ಬೆಳಿಗ್ಗೆ 12 ತೆಂಗಿನಕಾಯಿ ಗಣಪತಿ ಹವನ, ನಾಗತಂಬಿಲ, ಪಾದುಕಾಪೂಜೆ, ಭಜನೆ, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ನಡೆಯಿತು.

ಸಂಜೆ ನಾಗಸಾನಿಧ್ಯದಲ್ಲಿ ಆಶ್ಲೇಷ ಬಲಿ ಸೇವೆ, ಶ್ರೀ ಗುರುರಾಘವೇಂದ್ರ ಸ್ವಾಮಿಗೆ ಅಲಂಕಾರ ಪೂಜೆ ನಡೆಯಿತು.


ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳು ಧಾರ್ಮಿಕ ಉಪನ್ಯಾಸ ನೀಡಿದರು. ಹಿರಿಯರಾದ ವಿಷ್ಣುಭಟ್ ಪೆರುಂಬಾರು ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿ ಮೋಹನ ನಂಗಾರು, ಮಂದಿರದ ಪ್ರಧಾನ ಅರ್ಚಕ ಪುರೋಹಿತ ರಾಮಕೃಷ್ಣ ಭಟ್ ಪೆರುಂಬಾರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ನಿಶಾಂತ್ ಮೋಂಟಡ್ಕ ಉಪಸ್ಥಿತರಿದ್ದರು.


ರಾತ್ರಿ ಮಹಾಪೂಜೆ ಅನ್ನಸಂತರ್ಪಣೆ ಬಳಿಕ ಪುತ್ತೂರಿನ ಬಂಗಾರ್ ಕಲಾವಿದೆರ್ ಅಭಿನಯದ ತುಳು ಹಾಸ್ಯಮಯ ನಾಟಕ ‘ಕುಡ ಒಂಜಾಕ’ ಪ್ರದರ್ಶನಗೊಂಡಿತು. ಈ ಸಂದರ್ಭದಲ್ಲಿ ಮಂದಿರದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.