ಆಶ್ಲೇಷ ಬಲಿ ಪೂಜೆ -ಕಲಶಾಭಿಷೆಕ
ಇಂದು ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ವೈದಿಕ ಮಂತ್ರಾಕ್ಷತೆ
ಪಂಜದ ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನ ಇದರ ಪ್ರತಿಷ್ಠಾ ವಾರ್ಷಿಕೋತ್ಸವವು ಜ. 31.ರಂದು ಮುಂಜಾನೆಯಿಂದ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಆರಂಭ ಗೊಂಡಿತು.
ಜ.31ರಂದು ಮುಂಜಾನೆ ಶ್ರೀ ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಆಶ್ಲೇಷ ಬಲಿ ಪೂಜೆ, ಕಲಶಾಭಿಷೇಕ, ದೈವಗಳಿಗೆ ಮತ್ತು ನಾಗದೇವರಿಗೆ ತಂಬಿಲ, ಭಕ್ತರಿಂದ ಭಜನಾ ಸಂಕೀರ್ತನೆ,ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಿತು.
ದೇವಸ್ಥಾನದ ಆಡಳಿತ ಅಧಿಕಾರಿ, ಉತ್ಸವ ಸಮಿತಿಯವರು, ಭಕ್ತಾದಿಗಳು ಪಾಲ್ಗೊಂಡಿದ್ದರು.
ರಾತ್ರಿ ಗಂ.8.30ಕ್ಕೆ ಶ್ರೀ ದೇವರಿಗೆ ರಂಗಪೂಜೆ, ವೈದಿಕ ಮಂತ್ರಾಕ್ಷತೆ ,ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ.