ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ- ಮಿತ್ತೂರು- ಉಳ್ಳಾಕುಲು ದೈವಸ್ಥಾನ ರಸ್ತೆ ಅಭಿವೃದ್ಧಿಗೆ ರೂ.30ಲಕ್ಷ ಬಿಡುಗಡೆ ಗೊಂಡರೂ ಕಾಮಗಾರಿ ಆರಂಭವಾಗಿಲ್ಲವೆಂದು ಗ್ರಾಮಸ್ಥರು ಲೋಕೋಪಯೋಗಿ ಇಲಾಖೆಯ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕಳೆದ ಮಾರ್ಚ್ ನಲ್ಲಿ ಈ ಕಾಮಗಾರಿ ಸೇರಿದಂತೆ ಸುಳ್ಯ ವಿಧಾನ ಸಭಾ ಕ್ಷೇತ್ರದಾದ್ಯಂತ ವಿವಿಧ ಕಾಮಗಾರಿಗಳಿಗೆ ಒಂದು ಸಾವಿರ ಲಕ್ಷ ಹಣ ಬಿಡುಗಡೆಗೊಂಡಿತ್ತು. ವಿವಿಧ ಕಡೆಗಳಲ್ಲಿ ಕಾಮಗಾರಿ ನಡೆದರೂ ಇನ್ನೂ ಈ ಕಾಮಗಾರಿ ಆರಂಭಗೊಂಡಿಲ್ಲ. ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೇರಿ ಒಂದು ವಾರದ ಒಳಗೆ ಸುಳ್ಯ ಲೋಕೋಪಯೋಗಿ ಇಲಾಖೆಯ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹರೀಶ್ ರೈ ಉಬರಡ್ಕ ತಿಳಿಸಿದ್ದಾರೆ.
Home Uncategorized ಉಬರಡ್ಕ- ಮಿತ್ತೂರು- ಉಳ್ಳಾಕುಲು ದೈವಸ್ಥಾನ ರಸ್ತೆ ಅಭಿವೃದ್ಧಿ ವಿಳಂಬ: ಲೋಕೋಪಯೋಗಿ ಇಲಾಖೆಯ ಎದುರು ಪ್ರತಿಭಟನೆಯ ಎಚ್ಚರಿಕೆ