ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಹರಿಣಾಕ್ಷಿ ಮಹಾಬಲಡ್ಕರಿಗೆ ಬಹುಮಾನ

0

ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಜಾಲ್ಸೂರು ಗ್ರಾಮದ ಮಹಾಬಲಡ್ಕ ದಿನೇಶ್ ಇವರ ಪತ್ನಿ ಶ್ರೀಮತಿ ಹರಿಣಾಕ್ಷಿ.ಡಿ ಇವರು 400ಮೀ ಓಟದಲ್ಲಿ ಪ್ರಥಮ, 200 ಮೀ ಓಟದಲ್ಲಿ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ , 4×100 ರಿಲೇಯಲ್ಲಿ ಪ್ರಥಮ, 100 ಮೀ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ, ಅಂತಾರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಇವರು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಕ್ಯಾಂಪ್ಕೋ ಸಂಸ್ಥೆಯ ಕಾವು ಶಾಖೆಯಲ್ಲಿ ಉದ್ಯೋಗಿ