ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಸಡಗರ

0

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದೇವರ ಪ್ರತಿಷ್ಠಾ ವಾರ್ಷಿಕೋತ್ಸವವು ಸಡಗರದೊಂದಿಗೆ ಫೆ.5ರಂದು ಜರುಗಿತು.

ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಬೆಳಿಗ್ಗಿನಿಂದ ವಿವಿಧ ವೈಧಿಕ ಪೂಜಾ ಕೈಂಕರ್ಯಗಳು ನಡೆಯುತ್ತಿದೆ.
ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀಕ್ಷೇತ್ರದ ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪ್ರತಿಷ್ಠಾ ವಾರ್ಷಿಕೋತ್ಸವವು ನಡಯುತ್ತಿದ್ದು, ತ್ರಿಕಾಲ ಪೂಜೆಯು ನಡೆಯಲಿದೆ.
ಮಧ್ಯಾಹ್ನ ಶ್ರೀ ಮಹಾವಿಷ್ಣು ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.