ಕೊಲ್ಲಮೊಗ್ರದಲ್ಲಿ ಗ್ರಾಮಸ್ಥರ ಅಹವಾಲು ಆಲಿಸಿದ ಅರಣ್ಯ ಸಚಿವರು

0

ಮಡಿಕೇರಿ – ಗಾಳಿಬೀಡು-ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನದ ಭರವಸೆ

ಟೂರಿಸಂ ಅಭಿವೃದ್ಧಿಗೆ ಒತ್ತು, ಗ್ರಾಮಸ್ಥರ ಎಲ್ಲಾ ಮನವಿ ಪರಿಶೀಲನೆ ಮಾಡುತ್ತೇನೆ ಎಂದ ಸಚಿವರು

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದ.ಕ.ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್ ಹಾಗೂ ಕೊಲ್ಲಮೊಗ್ರ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಸಹಕಾರದಲ್ಲಿ ಫೆ.10ರಂದು ಪತ್ರಕರ್ತರು ಗ್ರಾಮ ವಾಸ್ತವ್ಯ ನಡೆಸುವ ಕೊಲ್ಲಮೊಗ್ರ ಗ್ರಾಮಕ್ಕೆ ರಾಜ್ಯ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಫೆ.5ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದಲ್ಲಿ ಇರುವ ಪ್ರಮುಖ ಬೇಡಿಕೆಗಳ ಬಗ್ಗೆ ಗ್ರಾಮಸ್ಥರು ಸಚಿವರಿಗೆ ಮನವಿ ಸಲ್ಲಿಸಿದರು. ಅಲ್ಲದೆ ದಕ್ಷಿಣ ಕನ್ನಡ-ಕೊಡಗು ಸಂಪರ್ಕ ಕಲ್ಪಿಸುವ ಗಾಳಿಬೀಡು-ಕಡಮಕಲ್ಲು- ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿ ಮಾಡಬೇಕು, ಕೊಲ್ಲಮೊಗ್ರ, ಹರಿಹರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಕಾಡು ಪ್ರಾಣಿ ಪ್ರಾಣಿಗಳ ಹಾವಳಿ, ಮನೆ ಅಡಿ ಸ್ಥಳದ ಹಕ್ಕು ಪತ್ರ ಬಗ್ಗೆ, ಕೃಷಿಕರಿಗೆ ಸಮಸ್ಯೆ ಎದುರಾಗಿರುವ ಬಗ್ಗೆ ಹರ್ಷಕುಮಾರ್ ದೇವಜನ ಹಾಗೂ ಗ್ರಾಮಸ್ಥರು ಮತ್ತು ಪತ್ರಕರ್ತರ ಗ್ರಾಮ ವಾಸ್ತವ್ಯದ ಉದ್ದೇಶದ ಬಗ್ಗೆ ದ.ಕ ಜಿಲ್ಲಾ ಪತ್ರಕರ್ತರ ಸಂಘದ ಅದ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಹವಾಲು ಸಲ್ಲಿಸಿದರು.

ಇದಕ್ಕುತ್ತರವಾಗಿ ಸಚಿವ ಈಶ್ವರ ಖಂಡ್ರೆ ಅವರು ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮದ‌ ಜನರು ಮುಂದಿರಿಸಿದ ಎಲ್ಲಾ ಸಮಸ್ಯೆಗಳ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಪರಿಹರಿಸಲಾಗುವುದು. ಅಲ್ಲದೆ ಇಲಾಖೆ ವತಿಯಿಂದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು. ಮಡಿಕೇರಿ ಸಂಪರ್ಕಿಸುವ ಗಾಳಿಬೀಡು-ಸುಬ್ರಹ್ಮಣ್ಯ ರಸ್ತೆ ಅಭಿವೃದ್ಧಿಗೆ ಎಲ್ಲಾ ಪ್ರಯತ್ನಗಳನ್ನೂ ನಡೆಸಲಾಗುವುದು. ಅರಣ್ಯದಲ್ಲಿ ಹಾದು ಹೋಗುವ ರಸ್ತೆಯ ಅನುಮತಿಗಾಗಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಸೇರಿದಂತೆ ಎಲ್ಲಾ ಪ್ರಯತ್ನವೂ ನಡೆಸಲಾಗುವುದು.‌ ಭಾಗಷಃ ಅರಣ್ಯ ಸಮಸ್ಯೆಯಿಂದ ಹಲವು ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗದ ಸಮಸ್ಯೆ ಗಮನಕ್ಕೆ ಬಂದಿದೆ. ಇದರ ಪರಿಹಾರಕ್ಕೆ ಸರ್ವೆ ನಡೆಸುವುದು ಸೇರಿದಂತೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಗ್ರಾಮಸ್ಥರಿಗೆ ಭರವಸೆ ನೀಡಿದರು.
ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಅತೀ ಹೆಚ್ಚಾಗಿದೆ. ಆನೆ ಹಾವಳಿ ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳುವ ಯೋಜನೆ ರೂಪಿಸಲಾಗಿದೆ. ರೈಲ್ವೇ ಹಳಿ ಬಳಸಿ ಬೇಲಿ ನಿರ್ಮಾಣ, ಆನೆ ಕಂದಕ, ಸೋಲಾರ್ ಬೇಲಿ ನಿರ್ಮಾಣ ಸೇರಿದಂತೆ ಯೋಜನೆ ರೂಪಿಸಲಾಗುತಿದೆ. ಆನೆ ಕಾರ್ಯಪಡೆ, ಚಿರತೆ ಕಾರ್ಯಪಡೆ ರಚಿಸಲಾಗಿದೆ ಎಂದು ವಿವರಿಸಿದ ಸಚಿವರು
ಈಕೋ ಟೂರಿಸಂ ಅಭಿವೃದ್ಧಿಗೆ ಸರಕಾರ ಎಲ್ಲಾ ರೀತಿಯ ಉತ್ತೇಜನ ನೀಡಲಾಗುತಿದೆ. ಕೊಲ್ಲಮೊಗ್ರ ಹರಿಹರ ಗ್ರಾಮ ವ್ಯಾಪ್ತಿಯಲ್ಲಿ ಗ್ರೀನ್ ಟ್ರಾಕ್‌ಗಳನ್ನು ಇಕೋ ಟೂರಿಸಂ ಯೋಜನೆಯಲ್ಲಿ ಅಭಿವೃದ್ಧಿ ಪಡಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು. ಏಕಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನಕ್ಕೆ ಸಚಿವರು ಈ ಸಂದರ್ಭದಲ್ಲಿ ಚಾಲನೆ ನೀಡಿದರು.

ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷೆ ಜಯಶ್ರೀ ಚಾಂತಾಳ, ಉಪಾಧ್ಯಕ್ಷ ಅಶ್ವತ್ ಯಲದಾಳು, ಹರಿಹರ ಗ್ರಾ.ಪಂ ಉಪಾಧ್ಯಕ್ಷ ಜಯಂತ ಬಾಳುಗೋಡು, ಕೊಲ್ಲಮೊಗ್ರು ಗ್ರಾ.ಪಂ ಸದಸ್ಯ ಮಾಧವ ಚಾಂತಾಳ, ಪುಷ್ಪರಾಜ್, ಉದಯ ಶಿವಾಲ,ಡಾ. ಸೋಮಶೇಖರ ಕಟ್ಟೆಮನೆ, ಡ್ಯಾನಿ ಯಾಲದಾಳು, ವಿನೂಪ್ ಮಲ್ಲಾರ, ಶೇಖರ ಅಂಬೆಕಲ್ಲು, ಬೆಳ್ಯಪ್ಪ ಖಂಡಿಗೆ, ಸತೀಶ್ ಟಿ.ಎನ್ ಟಿ.ಎನ್, ದಿನೇಶ್ ಮಡ್ತಿಲ, ಚಂದ್ರಶೇಖರ ಕೋನಡ್ಕ,ಮೋನಪ್ಪ ಕೊಳಗೆ, ಚೆನ್ನಕೇಶವ ಕೊಲ್ಲಮೊಗ್ರು, ರಾಧಾಕೃಷ್ಣ ಕಟ್ಟೆಮನೆ, ಕಲ್ಮಕಾರು,
ಕಾಂಗ್ರೆಸ್ ಮುಖಂಡರಾದ ಜಿ.ಕೃಷ್ಣಪ್ಪ, ಭರತ್ ಮುಂಡೋಡಿ, ರಕ್ಷಿತ್ ಶಿವರಾಂ, ಸುಧೀರ್ ಕುಮಾರ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ‌ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ,
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ‌‌ ಕಲ್ನಾರ್, ಮಹಾರಾಷ್ಟ್ರ ಕನ್ನಡಿಗರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ್, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ವಿಶ್ವನಾಥ ನಡುತೋಟ, ಪತ್ರಕರ್ತರಾದ ಬಾಲಕೃಷ್ಣ ಭೀಮಗುಳಿ, ಲೋಕೇಶ್ ಬಿ.ಎನ್, ಗಿರೀಶ್ ಅಡ್ಪಂಗಾಯ, ರತ್ನಾಕರ ಸುಬ್ರಹ್ಮಣ್ಯ, ಪ್ರಕಾಶ್ ಸುಬ್ರಹ್ಮಣ್ಯ ಶಿವರಾಮ ಕಜೆಮೂಲೆ ಮತ್ತಿತರರು ಉಪಸ್ಥಿತರಿದ್ದರು.