ಇಂದು ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವ

0

ಮೆರವಣಿಗೆ, ಸಭಾ ಕಾರ್ಯಕ್ರಮ, ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

ಸುದ್ದಿ ಚಾನೆಲ್ ನಲ್ಲಿ ನೇರ ಪ್ರಸಾರ

ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಗಳು ಇಂದು ದಿನಪೂರ್ತಿ ನಡೆಯಲಿದೆ.

ಬೆಳಿಗ್ಗೆ ಧ್ವಜಾರೋಹಣ ಶತಮಾನೋತ್ಸವದ ಮೆರವಣಿಗೆ, ಪೂರ್ವಾಹ್ನ ಗಂಟೆ 10.30ರಿಂದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ. ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಗಳ ಉದ್ಘಾಟನೆ ನಡೆಯಲಿದೆ.


ನವೀಕೃತ ತರಗತಿ ಕೊಠಡಿ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೂತನ ರಂಗಮಂದಿರವನ್ನು ಉದ್ಘಾಟನೆಯನ್ನು ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ.
ಹರೀಶ್ ಕುಮಾರ್ ಕ್ರೀಡಾಂಗಣ ಉದ್ಘಾಟಿಸಲಿದ್ದಾರೆ. ಶಿಕ್ಷಕರ ವಸತಿಗೃಹವನ್ನು ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಉದ್ಘಾಟಿಸಲಿದ್ದಾರೆ.
ಇಂಟರ್ ಲಾಕ್ ಉದ್ಘಾಟನೆ ಯನ್ನು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಉದ್ಘಾಟಿಸಲಿದ್ದಾರೆ.


ಆವರಣಗೋಡೆಯನ್ನು ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಉದ್ಘಾಟಿಸಲಿದ್ದಾರೆ. ಸಂಜೆ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸೇವೆಗೈದ ಶಿಕ್ಷಕರಿಗೆ ಸನ್ಮಾನ, ಸ್ಮರಣ ಸಂಚಿಕೆ ಬಿಡುಗಡೆ ನಡೆಯಲಿದೆ ಎಂದು ವಿವರಿಸಿದರು.‌ ಮಧ್ಯಾಹ್ನ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಕಾರ್ಯಕ್ರಮ ಗಳು ಸುದ್ದಿ ಚಾನೆಲ್‌ ನಲ್ಲಿ ನೇರ ಪ್ರಸಾರ ಗೊಳ್ಳಲಿದೆ‌‌