ಪಂಜ‌ ಜಾತ್ರೆ: ಶ್ರೀ ಕಾಚುಕುಜುಂಬ ದೈವದ ನೇಮ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ
ಫೆ.7.ರಂದು ಸಂಜೆ ದೇಗುಲದಿಂದ ಶ್ರೀ ಕಾಚುಕುಜುಂಬ, ಉಳ್ಳಾಕುಲು ದೈವಗಳ ಭಂಡಾರ ವನ್ನು ಮೆರವಣಿಗೆ ಮೂಲಕ ಮೂಲಸ್ಥಾನ ಗರಡಿ ಬೈಲಿಗೆ ಹೋಗಿ ಧ್ವಜಾರೋಹಣ , ಶ್ರೀ ಕಾಚುಕುಜುಂಬ ದೈವದ ನೇಮ ಪ್ರಸಾದ ವಿತರಣೆ , ಅನ್ನಸಂತರ್ಪಣೆ ನಡೆಯಿತು. ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ‌ದೇವಳದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವಾಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು, ಉತ್ಸವ ಸಮಿತಿ ಸದಸ್ಯರು,ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.


ಫೆ.8 ರಂದು ಮುಂಜಾನೆ ಗರಡಿ ಬೈಲಿನ ಮೂಲ ನಾಗನ ಕಟ್ಟೆಯಲ್ಲಿ ತಂಬಿಲ ಹಾಗೂ ಶ್ರೀ ಉಳ್ಳಾಕುಲು ದೈವದ ನೇಮ ,ಪ್ರಸಾದ ವಿತರಣೆ , ಧ್ವಜಾವರೋಹಣ, ಶ್ರೀ ದೇವಳದಲ್ಲಿ ಸಂಪ್ರೋಕ್ಷಣೆ ,ಮಹಾಪೂಜೆ ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ಜರುಗಲಿದೆ. ರಾತ್ರಿ ಶಿರಾಡಿ ದೈವದ ಬಂಡಾರ ಬರುವುದು.ಫೆ.9.ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶಿರಾಡಿ ದೈವದ ನೇಮ ಜರುಗಲಿದೆ.