ಸ್ನಾತಕೋತ್ತರ ವೈದ್ಯಕೀಯ ಪದವಿಯಲ್ಲಿ ಕೆ.ವಿ.ಜಿ ಮೆಡಿಕಲ್ ಕಾಲೇಜಿಗೆ ಒಟ್ಟು 05 ರ್‍ಯಾಂಕ್ ಗಳು

0

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 2023-24ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಪದವಿಯ ರ್‍ಯಾಂಕ್ ಪಟ್ಟಿಯನ್ನು ಪ್ರಕಟಿಸಿದ್ದು ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಒಟ್ಟು 05 ರ್‍ಯಾಂಕ್ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಡಾ. ಉಜ್ವಲ್ 1ನೇ ರ್‍ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆಯಲು ಅರ್ಹರಾಗಿರುತ್ತಾರೆ, ಡಾ. ಸ್ನೇಹ ಎಸ್.ಎನ್. 5ನೇ ರ್ಯಾಂಕ್, ವಿಕಿರಣ ಶಾಸ್ತ್ರ ವಿಭಾಗದಲ್ಲಿ ಡಾ. ವಿನುತ ಜಿ.ಎಂ. 10ನೇ ರ್‍ಯಾಂಕ್, ಮಾನಸಿಕ ರೋಗ ಚಿಕಿತ್ಸಾ ವಿಭಾಗದಲ್ಲಿ ಡಾ. ಶಶಿಕಲಾ ಐ.ಎಂ. 2ನೇ ರ್‍ಯಾಂಕ್, ಡಾ. ಆರುಶಿ ಸಿಂಗ್ 4ನೇ ರ್‍ಯಾಂಕ್ ಪಡೆದುಕೊಂಡಿರುತ್ತಾರೆ. ಕಾಲೇಜಿನ ಆಡಳಿತಮಂಡಳಿ, ಡೀನ್, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಈ ಸಾಧನೆಯನ್ನು ಅಭಿನಂದಿಸಿರುತ್ತಾರೆ.