ಧರ್ಮದ ಆಚರಣೆಯಿಂದ ದೇವರ ನಾಮ ಸಂಕೀರ್ತನೆಯಿಂದ ಸುದೀರ್ಘ ಕಾಲದ ತಪಸ್ಸಿನ ಫಲವನ್ನು ಪಡೆಯಲು ಸಾಧ್ಯ – ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ
ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದ 50 ನೇ ವರ್ಷದ ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭವು ಇಂದು ಬೆಳಗ್ಗೆ ನಡೆಯಿತು. ಕುಕ್ಕೆಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಯವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ರವರು ವಹಿಸಿದ್ದರು. ಮಂಗಳೂರು ರಾಧಾಕೃಷ್ಣ ದೇವಸ್ಥಾನದ ವೇದಮೂರ್ತಿ ಗಿರಿಧರ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು.
ಸಮಿತಿಯ ಗೌರವಾಧ್ಯಕ್ಷ ಉದ್ಯಮಿ ಕೃಷ್ಣ ಕಾಮತ್ ಅರಂಬೂರು, ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾವಸಂತ ಆಲೆಟ್ಟಿ, ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಆಲೆಟ್ಟಿ ಪಂಚಾಯತ್ ಸದಸ್ಯ ರತೀಶನ್ ಅರಂಬೂರು, ಇಡ್ಶಡ್ಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ನಾಯಕ್ ಅಂಜಿಕ್ಕಾರ್, ಆಲೆಟ್ಟಿ ಪಂಚಾಯತ್ ಮಾಜಿ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಕಾರ್ಯಾಧ್ಯಕ್ಷ ಕೃಷ್ಣಪ್ಪ ಕೆ.ಎಸ್ ಕೆದಂಬಾಡಿ, ಕಾರ್ಯದರ್ಶಿ ಬಂಗಾರು ಭಾರದ್ವಾಜ್ ರವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಪನ್ಯಾಸ ನೀಡಿದ ವೇದಮೂರ್ತಿ ಗಿರಿಧರ ಭಟ್ ಮಂಗಳೂರು ಎಲ್ಲಾ ಸ್ವಯಂ ಸೇವಕರಿಗೆ ಕೇಸರಿ ಶಾಲು ವಿತರಿಸಿದರು.
ಕು.ಹಂಸಿನಿ,ಕು.ಕಾರುಣ್ಯ ಪ್ರಾರ್ಥಿಸಿದರು. ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ ಪ್ರಾಸ್ತಾವಿಕ ಮಾತನಾಡಿದರು. ಮಂದಿರದ ಅಧ್ಯಕ್ಷ ರತ್ನಾಕರ ರೈ ಸ್ವಾಗತಿಸಿದರು. ಸಮಿತಿ ಕಾರ್ಯದರ್ಶಿ ಬಂಗಾರು ಭಾರದ್ವಾಜ್ ವಂದಿಸಿದರು.
ಸಂಚಾಲಕ ಅಶೋಕ ಪೀಚೆಮನೆ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಪದಾಧಿಕಾರಿಗಳು ಹಾಗೂ ಉಪ ಸಮಿತಿಯ ಸಂಚಾಲಕರು ಮತ್ತು ಸದಸ್ಯರು ಸಹಕರಿಸಿದರು.
ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.