ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀಗಳ ಭೇಟಿ

0

ಪುತ್ತೂರು: ಮಂಗಳೂರುನಲ್ಲಿ ಪತ್ರಿಕಾಗೋಷ್ಠಿಗೆ ಮೊದಲು ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದ ಮಂಗಳೂರಿನ ಸರ್ವ ನಿರ್ದೇಶಕರು, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವರೂ ಆಗಿರುವ ಡಿ.ವಿ.ಸದಾನಂದ ಗೌಡರ ನೇತೃತ್ವದಲ್ಲಿ ಮಂಗಳೂರಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಡಾ|ಧರ್ಮಪಾಲನಾಥ ಸ್ವಾಮೀಜಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ದ.ಕ.ಜಿಲ್ಲಾ ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ.ಬಿ, ಉಪಾಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಪ್ರಧಾನ ಕಾರ್ಯದರ್ಶಿ ಡಾ|ಎನ್.ಎ.ಜ್ಞಾನೇಶ್, ಜಂಟಿ ಕಾರ್ಯದರ್ಶಿ ದಾಮೋದರ ಗೌಡ, ಕೋಶಾಧಿಕಾರಿ ಪುತ್ತೂರು ಗೌಡ ಸಂಘದ ಮಾಜಿ ಅಧ್ಯಕ್ಷ ಕೆ.ವಿಶ್ವನಾಥ ಗೌಡ, ಜಂಟಿ ಕೋಶಾಧಿಕಾರಿ ಸೂರಜ್ ಕುಮಾರ್ ಯು, ಸಮಿತಿ ಸದಸ್ಯರಾದ ರಕ್ಷಿತ್ ಪುತ್ತಿಲ, ಕೆ.ವಿಜಯ ಗೌಡ, ಸೌಮ್ಯಲತಾ, ಯಶವಂತ ಕಳುವಾಜೆ, ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಗೌರಿ ಬನ್ನೂರು, ಶ್ರೀಕಾಂತ್ ಎಂ, ಎನ್.ಎ.ಅನೂಪ್, ಮಧುರಾ ಎಂ.ಆರ್, ವಿಶ್ವನಾಥ್ ಎನ್, ಸಾರಿಕಾ ಸುರೇಶ್, ಎಸ್.ಶಾಂತರಾಜ್, ಯು.ಎಸ್ ಲಿಂಗಯ್ಯ ಜೊತೆಗಿದ್ದರು.