ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ಬೆಳ್ಳಾರೆ ವತಿಯಿಂದ 27 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಫೆ.25 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 9.30 ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಆರಂಭ,ಮಧ್ಯಾಹ್ನ ಗಂಟೆ 12.30 ಕ್ಕೆ ಕುಲಾಲ ಭಜನಾ ತಂಡ ಸುಳ್ಯ,ಬೆಳ್ಳಾರೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ಗಂಟೆ 1.00 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.ಭಕ್ತಾದಿಗಳು ಹಾಗು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿ,ಶ್ರೀ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕೆಂದು ಸಂಘದ ಅಧ್ಯಕ್ಷ ನಾಗೇಶ್ ಕುಲಾಲ್ ತಿಳಿಸಿದ್ದಾರೆ.