ಫೆ.25 ರಂದು ಉಬರಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಿಗೆ ಕ್ರೀಡಾಕೂಟ

0

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವರ್ಣಮಹೋತ್ಸವದ ಸವಿನೆನಪಿಗಾಗಿ ನೂತನ ವಿಸ್ತೃತ ಕಟ್ಟಡದ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಂಘದ ಸದಸ್ಯರಿಗೆ ಕ್ರೀಡಾಕೂಟವು ಫೆ.25 ರಂದು ಉಬರಡ್ಕ ಸ.ಹಿ.ಪ್ರಾ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆ ವಹಿಸಲಿದ್ದಾರೆ. ಶಾಲಾ ಎಸ್.ಡಿ. ಎಂ.ಸಿ ಅಧ್ಯಕ್ಷ ಪುರುಷೋತ್ತಮ ಪಾಪುನಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.