ಕನಕಮಜಲು : ಪ್ರಥಮ ಹಂತದ ಗ್ರಾಮಸಭೆ

0

ಕನಕಮಜಲು ಗ್ರಾಮ ಪಂಚಾಯತಿಯ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಫೆ.16ರಂದು ಜರುಗಿತು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಶಾರದಾ ಉಗ್ಗಮೂಲೆ ಅವರು ಅಧ್ಯಕ್ಷತೆ ವಹಿಸಿದ್ದರು. ಸುಳ್ಯದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಶೈಲಜ ಅವರು ನೋಢಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ, ಸದಸ್ಯರುಗಳಾದ ಶ್ರೀಧರ ಕುತ್ಯಾಳ, ಇಬ್ರಾಹಿಂ ಕಾಸಿಂ ಕನಕಮಜಲು, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಶ್ರೀಮತಿ ದೇವಕಿ ಕುದ್ಕುಳಿ, ಶ್ರೀಮತಿ ಸುಮಿತ್ರ ಕುತ್ಯಾಳ, ಪ್ರಭಾರ ಗ್ರಾಮ ಲೆಕ್ಕಾಧಿಕಾರಿ ಶಾಹಿನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ ಸ್ವಾಗತಿಸಿದರು.