ಜಾಲ್ಸೂರು: ಸಂವಿಧಾನ ಜಾಗೃತಿ ಜಾಥಕ್ಕೆ ಸ್ವಾಗತ

ಸಂವಿಧಾನ ಜಾಗೃತಿ ಮೂಡಿಸುವ ಬೀದಿನಾಟಕ ಪ್ರದರ್ಶನ

0

ಸಂವಿಧಾನದ ಮೌಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥವು ಫೆ.17ರಂದು ಬೆಳಿಗ್ಗೆ ಕನಕಮಜಲಿನ ಮೂಲಕ ಸುಳ್ಯ ತಾಲೂಕಿಗೆ ಆಗಮಿಸಿದ್ದು, ಬಳಿಕ ಜಾಲ್ಸೂರಿಗೆ ಆಗಮಿಸಿದಾಗ, ಜಾಲ್ಸೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಾಗತಿಸಲಾಯಿತು.

ಜಾಲ್ಸೂರು ಪೇಟೆಯಲ್ಲಿ ಗ್ರಾ.ಪಂ. ಆಡಳಿತ ಮಂಡಳಿಯ ವತಿಯಿಂದ ಸ್ವಾಗತಿಸಿ, ಬಳಿಕ ಕಾಲ್ನಡಿಗೆಯ ಮೂಲಕ ಗ್ರಾ.ಪಂ. ವಠಾರಕ್ಕೆ ರಥವನ್ನು ಕರೆತರಲಾಯಿತು. ರಥದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ, ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಗ್ರಾ.ಪಂ. ಕಾರ್ಯದರ್ಶಿ ಸುಂದರ ಮುಪ್ಪೇರ್ಯ ಹಾಗೂ ಸದಸ್ಯರು ಹಾರಾರ್ಪಣೆ ಮಾಡಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದ, ಕುಮಾರ ಲಮಾಣಿ ಅವರು ಸಂವಿಧಾನದ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್, ಶಿಕ್ಷಣ ಇಲಾಖೆಯ ಸಿ.ಆರ್.ಪಿ. ಶ್ರೀಮತಿ ಅನುರಾಧ, ಶಿಕ್ಷಣ ಇಲಾಖೆಯ ಶ್ರೀಮತಿ ಆಶಾ ನಾಯಕ್, ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಸದಸ್ಯರುಗಳಾದ ಶ್ರೀಮತಿ ಅಂಬಿಕಾ ಕುಕಾಕಂದೂರು, ಶಿವಪ್ರಸಾದ್ ನೀರಬಸಿರು, ಶ್ರೀಮತಿ ದೀಪ ಅಜಕಳಮೂಲೆ, ಈಶ್ವರ ನಾಯ್ಕ ಕುಕ್ಕಂದೂರು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಬಳಿಕ ಸಂವಿಧಾನದ ಜಾಗೃತಿ ಮೂಡಿಸುವ ಬೀದಿ ನಾಟಕದ ಪ್ರದರ್ಶನ ನಡೆಯಿತು. ಗ್ರಾ.ಪಂ. ಕಾರ್ಯದರ್ಶಿ ಸುಂದರ ಮುಪ್ಪೇರ್ಯ ಸ್ವಾಗತಿಸಿ, ಸಿಬ್ಬಂದಿ ಚಿದಾನಂದ ದರ್ಖಾಸ್ತು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.