ಸುಳ್ಯ ನಗರ ಪಂಚಾಯತ್ ವತಿಯಿಂದ ಸಂವಿಧಾನ ಜಾಗೃತಿ ಜಾಥಾಕ್ಕೆ ಭವ್ಯ ಸ್ವಾಗತ

ಮನರಂಜಿಸಿದ ಬೀದಿ ನಾಟಕ ಪ್ರದರ್ಶನ

0

ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

ಸಂವಿಧಾನದ ಮೌಲ್ಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥವು ಫೆ.17ರಂದು ಕನಕಮಜಲು, ಜಾಲ್ಸೂರು ಮೂಲಕ ಸಾಗಿ ಬಂದು ಸುಳ್ಳಕ್ಕೆ ಪ್ರವೇಶಿಸಿತು. ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ವತಿಯಿಂದ ಜ್ಯೋತಿ ವೃತ್ತದ ಬಳಿ ಸ್ವಾಗತಿಸಲಾಯಿತು.

ಬಳಿಕ ಸುಳ್ಯ ಮುಖ್ಯ ಬೀದಿಯಲ್ಲಿ ಕಾಲ್ನಡಿಗೆಯ ಮೂಲಕ ಸಾಗಿ ಖಾಸಗಿ ಬಸ್ ನಿಲ್ದಾಣದ ಬಳಿ ಸೇರಿ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಸುಳ್ಯ ತಹಶೀಲ್ದಾರ್ ಮಂಜುನಾಥ್ ರವರು ಹಾರಾರ್ಪಣೆ ಮಾಡಿ ಸಂವಿಧಾನ ಪೀಠಿಕೆಯನ್ನು ಬೋಧಿಸಿ ಸಂವಿಧಾನದ ಬಗ್ಗೆ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಬಳಿಕ ನಗರ ಪಂಚಾಯತ್ ಸದಸ್ಯರುಗಳಾದ ವಿನಯಕುಮಾರ್ ಕಂದಡ್ಕ, ವೆಂಕಪ್ಪ ಗೌಡ ಮಾತನಾಡಿ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿ ಜಾಥಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಗರ ಪಂಚಾಯತಿ ಸದಸ್ಯರುಗಳಾದ ಕೆ ಎಸ್ ಉಮರ್,ಶಿಲ್ಪಾ ಸುದೇವ್, ಡೇವಿಡ್ ಧೀರಾ ಕ್ರಾಸ್ತ,ರಿಯಾಝ್ ಕಟ್ಟೆಕ್ಕಾರ್ಸ್,ಶರೀಫ್ ಕಂಠಿ,ಶೀಲಾ ಕರುಂಜಿ,ಕಿಶೋರಿ ಶೇಟ್, ಸುಧಾಕರ್,ಬುದ್ಧ ನ್ಯಾಕ್,ನಗರ ಪಂಚಾಯತ್ ಮುಖ್ಯ ಅಧಿಕಾರಿ ಸುಧಾಕರ್,ತಾಲೂಕು ಪಂಚಾಯಿತ್ ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ,ಝೆಡ್ ಪಿ ಇಂಜಿನಿಯರ್ ರುಕ್ಮಾಂಗಧ,ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಲಾಖೆ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಸಂವಿಧಾನದ ಬಗೆಗಿನ ಪ್ರಬಂಧ ಮತ್ತು ಲೇಖನ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಬಳಿಕ ಕಲಾವಿದ ಗಿರೀಶ್ ನಾವಡ ಸುರತ್ಕಲ್ ರವರ ತಂಡದಿಂದ ಸಂವಿಧಾನದ ಜಾಗೃತಿ ಮೂಡಿಸುವ ಬೀದಿ ನಾಟಕದ ಪ್ರದರ್ಶನ ನಡೆಯಿತು.

ಜಾಥಾ ವಾಹನದಲ್ಲಿ ಅಂಬೇಡ್ಕರ್ ರವರ ಆಕರ್ಷಕ ಪ್ರತಿಮೆಯನ್ನು ನಿರ್ಮಿಸಲಾಗಿತ್ತು. ಸಂವಿಧಾನ ಪೀಠಿಕೆಯ ಪುಸ್ತಕವನ್ನು ನಿರ್ಮಿಸಿ, ಬೃಹತ್ ಎಲ್ ಇ ಡಿ ಪರದೆಯನ್ನು ಅಳವಡಿಸಿ ಸಂವಿಧಾನದ ಅರಿವನ್ನು ಪ್ರಸಾರ ಪಡಿಸಲಾಗುತಿತ್ತು. ಈ ಕಾರ್ಯಕ್ರಮದಲ್ಲಿ ಸುಳ್ಯದ ವಿವಿಧ ಶಾಲೆಗಳಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು,ಮತ್ತು ಶಾಲಾ ಶಿಕ್ಷಕರು ಭಾಗವಹಿಸಿದ್ದರು. ಸುಳ್ಯ ಕಂದಾಯ ನಿರೀಕ್ಷಕ ಅವಿನ್ ರಂಗತಮಲೆ,ವಿ ಎ ತಿಪ್ಪೇಶ್,ನಗರ ಪಂಚಾಯತ್ ಕಚೇರಿಯ ಎಲ್ಲಾ ಸಿಬ್ಬಂದಿ ವರ್ಗದವರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವ ಜನತೆಗೆ ತಂಪು ಪಾನೀಯ ಮತ್ತು ಸಿಹಿ ತಿಂಡಿ ವಿತರಣಾ ಕಾರ್ಯಕ್ರಮ ನಡೆಯಿತು.