ಕರ್ನಾಟಕದ ಸಾಂಸ್ಕೃತಿಕ ನಾಯಕ, ಜಗಜ್ಯೋತಿ, ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿ ಫೆ.17 ರಂದು ಅನಾವರಣಗೊಳಿಸಲಾಯಿತು.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು ಮಾತನಾಡಿ 12ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ, ಮತ್ತು ವರ್ಗ ರಹಿತ ಸಮಾಜ, ಜೀವನ ಮಾರ್ಗ, ಸರ್ವಕಾಲಕ್ಕೂ ದಾರಿದೀಪವಾಗಿದೆ. ಅಲ್ಲದೆ ಜಗಜ್ಯೋತಿ ಬಸವಣ್ಣ ನವರು ಸಾರ್ವತ್ರಿಕ ಮತ್ತು ಸರ್ವಕಾಲಿಕ ,ಸರ್ವಜನ, ಸಮಭಾವದ , ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವರು ಎಂದು ನುಡಿದರು.
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ದಿಲೀಪ್, ಕಚೇರಿ ಸಿಬ್ಬಂದಿಗಳು ,ಸಂಜೀವಿನಿ ಹಾಗೂ ಸ್ವಾಸಹಾಯ ಒಕ್ಕೂಟದ ಸದಸ್ಯರು ,ಸ್ಥಳೀಯರು ಹಾಜರಿದ್ದರು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ ಸ್ವಾಗತಿಸಿ , ವಂದಿಸಿದರು.