ರಾಜ್ಯ ಕಾನೂನು ಮಾನವ ಹಕ್ಕುಗಳ ಕಾರ್ಯದರ್ಶಿ ಪದ್ಮನಾಭ ಜತ್ತಿಲರಿಗೆ ಬೆಂಗಳೂರಿನಲ್ಲಿ ಸನ್ಮಾನ

0

ಬೆಂಗಳೂರಿನ ಹುಣಸೆಮಾರನಹಳ್ಳಿಯ ಜಗದ್ಗುರು ಪಂಡಿತಾರಾಧ್ಯ ಪ.ಪೂ. ಕಾಲೇಜಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಬಳ್ಪ ಗ್ರಾಮದ ಪದ್ಮನಾಭ ಜತ್ತಿಲರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾನೂನು ಮತ್ತು ಮಾನವ ಹಕ್ಕುಗಳ ಕೆ.ಪಿ.ಸಿ.ಸಿ. ರಾಜ್ಯ ಕಾರ್ಯದರ್ಶಿ ಪದ್ಮನಾಭ ಜತ್ತಿಲರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತಾ ವಿದ್ಯಾರ್ಥಿಗಳು ಮೌಲ್ಯಾಧಾರಿತ ಶಿಕ್ಷಣದ ಜೊತೆಗೆ ಜವಾಬ್ದಾರಿ, ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮಗೆ ದೊರಕಿದ ಅವಕಾಶಗಳನ್ನು ಉಪಯೋಗಿಸಿಕೊಂಡು ತಮ್ಮಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಹೊರತಬೇಕು. ತಂದೆ ತಾಯಿಯರ ಆಶೀರ್ವಾದ, ಹಿರಿಯರ ಮಾರ್ಗದರ್ಶನವನ್ನು‌ ಪಡೆದು‌ ತಮ್ಮ ಭವಿಷ್ಯ ರೂಪಿಸಿಕೊಳ್ಳಿ ಎಂದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಪ್ರಮುಖರು ಭಾಗವಹಿಸಿದ್ದರು.