ಸಂವಿಧಾನ ಜಾಗೃತಿ ಜಾಥಾ ಪ್ರಯುಕ್ತ ಪ. ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಸುಳ್ಯ, ಪ.ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಅಜ್ಜಾವರ ಹಾಗೂ ಪ. ಜಾತಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಸುಳ್ಯ ಸಹಯೋಗದಲ್ಲಿ ಗ್ರೇಡ್ 2 ತಹಶೀಲ್ದಾರ್ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಪ.ಜಾತಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಅಜ್ಜಾವರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿಯ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ, ಶ್ರೀಮತಿ ಮಮತಾ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ವಿಠಲ ಹಾಗೂ ತಾಲೂಕು ಕಚೇರಿಯ ಮಹಾದೇವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಜರಿದ್ದರು. ವಾರ್ಡನ್ ಅರ್ಷಿಯ ಸ್ವಾಗತಿಸಿ, ವಂದಿಸಿದರು.