ಗಾಂಜಾ ಮಾರಾಟ ಪ್ರಕರಣದಲ್ಲಿ 4 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರು

0

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 4 ವರ್ಷಗಳ ಹಿಂದೆ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ ಕ್ರ 36/2018 ಕಲಂ -20(B)(1i)(A)NDPS ಪ್ರಕರಣದ ಆರೋಪಿ ಹಾಸನ ಜಿಲ್ಲೆಯ ಕೆರೆಕೋಡಿ ನಿವಾಸಿ ಸಾದಿಕ್ ಶರೀಫ್ ಬಂಧಿತ ಆರೋಪಿಯಾಗಿದ್ದಾನೆ.
ಈತನ ಬಂಧನಕ್ಕಾಗಿ ಬಲೆ ಬೀಸಿದ್ದ ಪೊಲೀಸರು ಫೆಬ್ರವರಿ 16ರಂದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಾಚಗೇನಹಳ್ಳಿ ಎಂಬಲ್ಲಿನಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ರವರ ಮಾರ್ಗದರ್ಶನದ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂತೋಷ್ ಬಿ ಪಿ, ಸಿಬ್ಬಂದಿಗಳಾದ ಪ್ರವೀಣ್ ಹಾಗೂ ಸಂತೋಷ್ ಕಾರ್ಯನಿರ್ವಹಿಸಿದ್ದರು.


ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.