ಕನಕಮಜಲು: ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯ

0

ಮಂಗಳೂರಿ‌ನ ಖಾಸಗಿ ಆಸ್ಪತ್ರೆಗೆ ದಾಖಲು

ಕೈಯಲ್ಲಿ ಪಟಾಕಿ ಸಿಡಿದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೋರ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾದ ಘಟನೆ ಫೆ.20ರಂದು ಬೆಳಿಗ್ಗೆ ಕನಕಮಜಲಿನಲ್ಲಿ ಸಂಭವಿಸಿದೆ.

ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಹಾ ಭಜನೆಯು ಜರುಗುತ್ತಿದ್ದು, ಕನಕಮಜಲು ಗ್ರಾಮದ ಗಬ್ಬಲಡ್ಕ
ಪುರುಷೋತ್ತಮ ನಾಯ್ಕರ ಮಗ
ಚಂದ್ರಶೇಖರ ಗಬ್ಬಲಡ್ಕ ಎಂಬವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಪೋಟಗೊಂಡು, ಅವರ ಕೈಯ ಬೆರಳುಗಳಿಗೆ ಗಂಭೀರವಾಗಿ ಗಾಯಗೊಂಡರೆನ್ನಲಾಗಿದೆ.
ತಕ್ಷಣ ಸ್ಥಳೀಯರು ಸೇರಿ ಅವರನ್ನು ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆದ
ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.