ನಡುಗಲ್ಲು : ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಎನ್‌ಎಸ್‌ಎಸ್ ಶಿಬಿರ

0

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವು ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.೧೮ ರಂದು ಆರಂಭಗೊಂಡಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಭಾರತಿ ಸಾಲ್ತಾಡಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್‌ಕುಮಾರ್ ಕೆ.ಆರ್. ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ರಿಟ್ವಾಲ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಮಾನವ ಸಂಪನ್ಮೂಲ ಆಡಳಿತ ಮತ್ತು ಸಿ.ಎಸ್ ಆರ್ ವಿಭಾಗದ ನಿರ್ಧೇಶಕರಾದ ದಿನೇಶ್‌ಅತ್ಯಾಡಿ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೆಶಕರಾದ ನವೀನ್ ಬಾಳುಗೋಡು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸುಳ್ಯ ಘಟಕದ ಅಧ್ಯಕ್ಷ ತೀರ್ಥರಾಮ ಹೆಚ್.ಬಿ. ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ ಸುಳ್ಯ ಘಟಕದ ಅಧ್ಯಕ್ಷ ಶ್ರೀಧರ ಗೌಡ ಗುತ್ತಿಗಾರು, ಗ್ರಾ.ಪಂ. ಸದಸ್ಯರಾದ ಶ್ರೀಮತಿ ಪ್ರಮೀಳ ಎರ್ದಡ್ಕ, ಶ್ರೀಮತಿ ಲೀಲಾವತಿ ಅಂಜೇರಿ, ನಡುಗಲ್ಲು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ, ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಪಿ., ಶಾಲಾ ಶಿಕ್ಷಕಿ ಶ್ರೀಮತಿ ವನಜಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ರಾಮಕೃಷ್ಣ ಕೆ.ಎಸ್. ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಶಿಬಿರಾಧಿಕಾರಿ ಡಾ.ಲತಾ ಎನ್. ವಂದಿಸಿದರು. ಶಿಬಿರಾರ್ಥಿ ಕು.ಶ್ರುತಿ ಆರ್.ಎಲ್. ಕಾರ್ಯಕ್ರಮ ನಿರೂಪಿಸಿದರು.