ನಾಳೆ ಮಿನುಂಗೂರು ದೇವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ – ಸಭಾ ಕಾರ್ಯಕ್ರಮ

0

ಒಡಿಯೂರು ಸ್ವಾಮೀಜಿಯವರಿಂದ ಆಶೀರ್ವಚನ-ಪದ್ಮನಾಭ ತಂತ್ರಿಗಳಿಂದ ಶಿಲಾನ್ಯಾಸ

ಗುಂಡೂರಾವ್, ಕಟೀಲ್, ಅಂಗಾರ, ಶಾಸಕರ ಉಪಸ್ಥಿತಿ

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳಿಗೊಳಪಟ್ಟ ಪಂಚಸ್ಥಾಪನೆಗಳಲ್ಲಿ ಒಂದಾದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಗೊಳ್ಳುತ್ತಿದ್ದು, ನವೀಕರಣ ಪುನಃ ಪ್ರತಿಷ್ಠೆ ಸಿದ್ಧಿರ್ಥಕ್ಕಾಗಿ ಶಿಲಾನ್ಯಾಸ ಕಾರ್ಯಕ್ರಮವು ನಾಳೆ (ಫೆ.22) ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು ಕ್ಷೇತ್ರದ ತಂತ್ರಿಗಳು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಕು| ಭಾಗೀರಥಿ ಮುರುಳ್ಯ ವಹಿಸಲಿದ್ದಾರೆ.

ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ಕ್ಷೇತ್ರ ಒಡಿಯೂರು ಇಲ್ಲಿಯ ಗುರುದೇವಾನಂದ ಸ್ವಾಮೀಜಿಗಳು ಆಶೀರ್ವಚನ ನೀಡಲಿದ್ದಾರೆ‌.

ಸಭಾ ಕಾರ್ಯಕ್ರಮ ದ ಉದ್ಘಾಟನೆಯನ್ನು ದ.ಕ.ಉಸ್ತುವಾರಿ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಎಸ್.ಅಂಗಾರ, ವಾಸ್ತುಶಿಲ್ಪಿ ಪ್ರಸಾದ್ ಮುನಿಯಂಗಳ, ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಮರ್ಕಂಜ ಗ್ರಾ.ಪಂ.ಅಧ್ಯಕ್ಷೆ ಗೀತಾ ಹೊಸೊಳಿಕೆ, ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಅಧ್ಯಕ್ಷ ಧನಂಜಯ ಕುಮಾರ್, ಮರ್ಕಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಮೇಶ್ ಕಾಟೂರಾಯ, ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಪಂಚಸ್ಥಾಪನೆಗಳ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವಾಧ್ಯಕ್ಷ ರಾಘವ ಗೌಡ ಕಂಜಿಪಿಲಿ, ಮಾಜಿ ಆಡಳಿತ ಮೊಕ್ತೇಸರ ಯುವರಾಜ್ ಜೈನ್, ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ಮಾಪಲತೋಟ ಗೌರವ ಉಪಸ್ಥಿತರಿರಲಿದ್ದಾರೆ.