ಗುತ್ತಿಗಾರಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥ

0

ಗ್ರಾ.ಪಂ ಆಡಳಿತದಿಂದ, ಸ್ವಾಗತ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ

ಸಂವಿಧಾನದ ಮೌಲ್ಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ರಥವು ಗುತ್ತಿಗಾರು ಗ್ರಾಮಕ್ಕೆ ಫೆ.21 ರಂದು ಆಗಮಿಸಿದಾಗ ಸಂತೆ ಮಾರುಕಟ್ಟೆ ಬಳಿಯಿಂದ ಸ್ವಾಗತಿಸಲಾಯಿತು.


ಬಳಿಕ ಮೆರವಣಿಗೆ ಮೂಲಕ ಸಾಗಿ ಗುತ್ತಿಗಾರು ಗ್ರಾ.ಪಂ ಗೆ ತೆರಳಲಾಯಿತು. ಅಲ್ಲಿ ಕಾರ್ಯಕ್ರಮದ ಸಭೆಯಲ್ಲಿ ಸಂವಿಧಾನ ಜಾಗೃತಿ ಜಾಥಾದ ಪ್ರತಿಜ್ಞೆ ಮಾಡಲಾಯಿತು.
ಸಭೆಯನ್ನು ಉದ್ದೇಶಿಸಿ ಗುತ್ತುಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಮಾತನಾಡಿದರು. ಗ್ರಾ.ಪಂ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ನೋಡೆಲ್ ಅಧಿಕಾರಿ ಮಂಜುನಾಥ್, ಗ್ರಾ.ಪಂ ಸದಸ್ಯರು, ಸ್ಥಳೀಯ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾ.ಪಂ ವ್ಯಾಪ್ತಿಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.