ರಾಜ್ಯಾದ್ಯಂತ 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ನಿಷೇಧ , ಹುಕ್ಕಾ ಬಾರ್ ಬ್ಯಾನ್

0

ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಹುಕ್ಕಾ ಬಾರ್ ಬ್ಯಾನ್ ಮಾಡಿದ್ದು, ಜೊತೆಗೆ 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ನಿಷೇಧಿಸಿದೆ. ಈ ಮೂಲಕ ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಮತ್ತಷ್ಟು ನಿರ್ಬಂಧ ವಿಧಿಸಲಾಗಿದೆ.

ವಿಧಾನಸಭೆಯಲ್ಲಿ ತಂಬಾಕು ಉತ್ಪನ್ನಗಳ ಕಾಯಿದೆ (COTPA) ಕೋಟ್ಪಾ ಕಾಯ್ದೆಗೆ ಅಂಗೀಕಾರ ಸಿಕ್ಕಿದ್ದು, ಈ ಮೂಲಕ ರಾಜ್ಯದಾದ್ಯಂತ ಎಲ್ಲಾ ಹುಕ್ಕಾ ಬಾರ್ ಗಳನ್ನು ಅಧಿಕೃತವಾಗಿ ನಿಷೇಧಿಸಲಾಗಿದೆ.
ರಾಜ್ಯದಲ್ಲಿ ಈಗಾಗಲೇ ಹುಕ್ಕಾಬಾರ್ ನಿಷೇಧಿಸಲಾಗಿದ್ದು, ಇದಕ್ಕೆ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿ ಅಂಗೀಕಾರ ಪಡೆಯಲಾಗಿದೆ.

ಇದುವರೆಗೆ 18 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ಕಾನೂನು ಇದ್ದು, ಇದನ್ನು 21 ವರ್ಷಕ್ಕೆ ಏರಿಸಲಾಗಿದೆ.

21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವುದನ್ನು ನಿಷೇಧಿಸುವ ಮಸೂದೆಗೂ ಅಂಗೀಕಾರ ನೀಡಲಾಗಿದೆ. ಅದೇ ರೀತಿ ದಂಡದ ಪ್ರಮಾಣವನ್ನು 100 ರಿಂದ 1000 ಕ್ಕೆ ಏರಿಸಲಾಗಿದೆ.