ದೇವಚಳ್ಳ : ಸಂವಿಧಾನ ಜಾಗೃತಿ ಜಾಥಾ

0

ದೇವಚಳ್ಳ ಗ್ರಾಮ ಪಂಚಾಯತ್ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಫೆ.21ರಂದು ಪೂರ್ವಾಹ್ನ ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆಯಿತು.

ಎಲಿಮಲೆ ಪೇಟೆಯಲ್ಲಿ ಸಂವಿಧಾನ ಜಾಥಾ ರಥವನ್ನು ಸ್ವಾಗತಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ ಇ ರವರು ಮೆರವಣಿಗೆಗೆ ಚಾಲನೆ ನೀಡಿದರು. ಪೂರ್ಣ ಕುಂಭ ಸ್ವಾಗತದೊಂದಿಗೆ ಸಾಗಿದ ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.

ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರಾದ ವಸಂತ್ ನಾಯಕ್ ಸಂವಿಧಾನದ ಪೀಠಿಕೆಯನ್ನು ವಾಚಿಸುವುದರೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದ ನೋಡಲ್ ಅಧಿಕಾರಿ ಮೆಸ್ಕಾಂನ ಎಇಇ ಹರೀಶ್ ನಾಯ್ಕ್ ಸುಳ್ಯ , ದೇವಚಳ್ಳ ಗ್ರಾಮ ಪಂಚಾಯತಿನ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಸೇವಾಜೆ, ಸದಸ್ಯರಾದ ಸುಲೋಚನಾ ದೇವ, ರಮೇಶ್ ಪಡ್ಪು, ಪ್ರೇಮಲತಾ ಕೇರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ್ ಬಿ, ಗ್ರಾಮ ಆಡಳಿತಾಧಿಕಾರಿ ಮಧು ಕೆ ಬಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ದೀಪಿಕಾ, ಸಂಜೀವಿನಿ ಸ್ವಸಹಾಯ ಸಂಘದ ತಾಲೂಕು ಸಂಯೋಜಕಿ ಶ್ವೇತಾ, ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್, ಎಸ್ ಡಿ ಎಂ ಸಿ ಸದಸ್ಯರಾದ ಧನಂಜಯ ಬಾಳೆತೋಟ, ದೇವಚಳ್ಳ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಯಾನಂದ ಪಟ್ಟೆ, ಸರಕಾರಿ ಪ್ರೌಢಶಾಲೆ ಎಲಿಮಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕೆ, ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳದ ಮುಖ್ಯ ಶಿಕ್ಷಕ ಶ್ರೀಧರ ಗೌಡ ಕೆರೆಮೂಲೆ , ಜ್ಞಾನ ದೀಪ ವಿದ್ಯಾಸಂಸ್ಥೆ ಎಲಿಮಲೆಯ ಮುಖ್ಯ ಶಿಕ್ಷಕ ಗದಾಧರ ಬಾಳುಗೋಡು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ದೇವಚಳ್ಳ ಗ್ರಾಮ ಪಂಚಾಯತ್ ಮತ್ತು ಶಾಲೆಗಳ ಸಿಬ್ಬಂದಿ ವರ್ಗದವರು ,ವಿದ್ಯಾರ್ಥಿಗಳು ಮತ್ತು ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ರಮೇಶ್ ಪಡ್ಪು ರವರು ಸ್ವಾಗತಿಸಿ, ಶ್ರೀ ಮತಿ ಸಂಧ್ಯಾ ಕೆ ಧನ್ಯವಾದ ಅರ್ಪಿಸಿದರು.

ಶಿಕ್ಷಕ ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಗಿರೀಶ್ ನಾವಡ ಮತ್ತು ಬಳಗದವರಿಂದ ಕಿರು ನಾಟಕ “ಚಿಂತನ ಮಂಥನ” ಪ್ರದರ್ಶನ ಗೊಂಡಿತು.