ಬಳ್ಪ ಗ್ರಾ.ಪಂ. ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

0

ದ.ಕ. ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆ ಕಡಬ ತಾಲೂಕು, ಬಳ್ಪ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಫೆ. 21ರಂದು ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಗಾಯನಕೆರೆಯ ಬಳಿ ಆಗಮಿಸಿತು.

ಬ್ಯಾಂಡ್ ಸೆಟ್, ಹಾಗೂ ಶಾಲಾ ವಿಧ್ಯಾರ್ಥಿಗಳಿಂದ ಬಳ್ಪ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಕಾಲ್ನಡಿಗೆ ಜಾಥಾ ಮೂಲಕ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಬಳ್ಪ ಗ್ರಾಮ ಪಂಚಾಯತ್ ನ ಅಭಿವೃದ್ದಿ ಅಧಿಕಾರಿ, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳು ಮತ್ತು ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲೆಯ ಮುಖ್ಯಶಿಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಯವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪಂಚಾಯತ್ ಅಭಿವೃದ್ದಿ ಅಧಿಕಾರಿ, ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು , ಸಮಾಜ ಇಲಾಖೆಯ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸಂಘ ಸಮಿತಿ ಪದಾಧಿಕಾರಿಗಳು, ಸಂಜೀವಿನಿ ಒಕ್ಕೂಟದವರು, ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

ಹಾಗೂ ಸಂವಿಧಾನ ಪೀಠಿಕೆ ಪಠಣ, ಸಂವಿಧಾನ ಹಾಗೂ ಸರಕಾರದ ಯೋಜನೆಗಳ ಬಗ್ಗೆ ಅರಿವು, ಬೀದಿ ನಾಟಕ, ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.