ನಾಳೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಪದಗ್ರಹಣ

0

ಸುಳ್ಯ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅವರು ನಾಳೆ (ಫೆ.23) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಬಿಜೆಪಿ ಮಂಡಲ ಸಮಿತಿ ಕಚೇರಿಯಲ್ಲಿ ನಡೆಯುವ ಸಮಾರಂಭದಲ್ಲಿ ವೆಂಕಟ್ ವಳಲಂಬೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮಂಡಲ ಸಮಿತಿಯ ಪದಾಧಿಕಾರಿಗಳ ಘೋಷಣೆ ಈ ಸಭೆಯಲ್ಲಿ ಮಾಡಲಾಗುತ್ತದೆ. ಮಂಡಲ ಸಮಿತಿ ಪದಾಧಿಕಾರಿಗಳ ಪಟ್ಟಿ ಸಿದ್ಧಗೊಂಡಿದ್ದು ನಾಳೆ ಘೋಷಣೆಯಾಗಲಿದೆ ಎಂದು ತಿಳಿದು ಬಂದಿದೆ.


ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತಿತರ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಾಳೆ ಪ್ರಮುಖರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಮಂಡಲ ಸಮಿತಿ ಪದಾಧಿಕಾರಿಗಳ ಪಟ್ಟಿ ಅಂತಿಮಗೊಳಿಸಿ ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ನಿಯೋಜಿತ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.