ಮಡಪ್ಪಾಡಿ : ಸಂವಿಧಾನ ಜಾಗೃತಿ ಜಾಥ

0

ಮಡಪ್ಪಾಡಿ ಗ್ರಾಮ ಪಂಚಾಯತ್‌, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಶ್ರಯದಲ್ಲಿ ಭಾರತದ ೭೫ನೇ ವರ್ಷದ “ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮವನ್ನು ಬೈಕ್‌ ರ‍್ಯಾಲಿ ಹಾಗೂ ಕಾಲ್ನಡಿಗೆ ಜಾಥದಲ್ಲಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಎಲ್ಲಾ ಶಾಲೆ ವಿದ್ಯಾರ್ಥಿಗಳಿಂದ, ಗ್ರಾ.ಪಂ ಆಡಳಿತ ಮಂಡಳಿ, ಗ್ರಾಮದ ಎಲ್ಲಾ ಸಂಘ ಸಂಸ್ಥೆಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಮತ್ತು ಗ್ರಾಮಸ್ಥರಿಂದ ಬ್ಯಾಂಡ್‌ ಸೆಟ್‌ ನೊಂದಿಗೆ ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮ ರವರು ಡಾ. ಬಿ ಆರ್‌ ಅಂಬೆಡ್ಕರ್‌ ಪುತ್ಥಳಿಗೆ ಹಾರಾರ್ಪಣೆ ಮಾಡಿದರು.

ಬಳಿಕ ಯುವಕ ಮಂಡಲ ಸಭಾಭವನದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲಾ ಅಧ್ಯಾಪಕರು, ವಿದ್ಯಾರ್ಥಿ ನಾಯಕರು ಹಾಗೂ ವಿವಿಧ ಗಣ್ಯರಿಂದ ದೀಪ ಬೆಳಗಿಸಿ ಡಾ. ಬಿ. ಆರ್‌. ಅಂಬೆಡ್ಕರ್‌ರವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ನೇರವೆರಿಸಿದರು.

ಬಳಿಕ
ಸಂವಿಧಾನದ ಪೀಠಿಕೆ ಪ್ರತಿಜ್ಞಾ ವಿಧಿ ಮಾಡಲಾಯಿತು. ಜಾಗೃತಿ ಕಲಾ ತಂಡದಿಂದ ಬೀದಿ ನಾಟಕ ನಡೆಸಲಾಯಿತು. ಹಾಗೂ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಸ್ಪರ್ದೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಪಿ.ಸಿ. ಜಯರಾಮ, ಉಪಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ‌ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಂಜೀವಿನಿ ಸಂಘದ ಸದಸ್ಯರು, ಯುವಕ ಮಂಡಲದ ಸದಸ್ಯರು, ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗವಹಿಸಿದರು.