ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರದ ಹಿನ್ನಲೆ

0

ಗ್ರಾಮ ಪಂಚಾಯತ್ ನಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ನಿರ್ಧಾರ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ನೌಕರರು ತಮಗೆ ಆಗುತ್ತಿರುವ ಅನ್ಯಾಯ ಮತ್ತು ಸಮಸ್ಯೆಗಳ ವಿರುದ್ಧ ಜನರಿಗೆ ನೀಡುವ ಸೇವೆಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮಾ.01ರಿಂದ ಗ್ರಾಮ ಪಂಚಾಯತ್ ನಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ಇಲಾಖೆಯಿಂದ ಬೇಡಿಕೆ ಇಡೇರುವವರೆಗೂ ಜಿಲ್ಲೆಯಾದ್ಯಂತ ಶಾಂತಿಯುತ ಪ್ರತಿಭಟನೆಯನ್ನು ನಡೆಸಲಿದ್ದೇವೆ ಎಂದು ಗ್ರಾಮ ಪಂಚಾಯತ್ ಶ್ರೇಯೋಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ದಯಾನಂದ್ ಮಠತಡ್ಕ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ನಲ್ಲಿ ಸೇವೆ ಸಲ್ಲಿಸುತ್ತಿರುವ ನಾವು ಹಲವು ವರ್ಷಗಳಿಂದ ಸಂಘಟನೆಯ ಮೂಲಕ ಬೇಡಿಕೆಗಳನ್ನು ಇಲಾಖೆಗೆ ಸಲ್ಲಿಸುತ್ತ ಬಂದಿದ್ದು ಅವುಗಳನ್ನು ಈಡೇರಿಸದೇ ಆರೋಗ್ಯ ಮತ್ತು ಸೇವಾ ಭದ್ರತೆ ಇಲ್ಲದೆ ಒತ್ತಡದಿಂದ ಕಾರ್ಯ ನಿರ್ವಹಿಸುತಿದ್ದೇವೆ‌ ಆದುದರಿಂದ ನಮ್ಮ ಬೇಡಿಕೆಗಳನ್ನು ಈಡೇರಿಸುವರೆಗೆ ಕಛೇರಿಯ ಸಮಯದಲ್ಲಿ ಸೇವೆಯನ್ನು ನೀಡುತ್ತಾ ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.