ಮಂದಿರದ ಮಹಾದ್ವಾರದ ಉದ್ಘಾಟನೆ- ಶಾಸಕರಿಂದ
ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ
ಸುಳ್ಯ ಶ್ರೀ ರಾಮ ಮಂದಿರದ ಬ್ರಹ್ಮಕಲಶೋತ್ಸವದ ಆರಂಭದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ವುಫೆ. 25 ರಂದು ನಡೆಯಿತು.
ಮಂದಿರದ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ಕೆ.ಉಪೇಂದ್ರ ಪ್ರಭು ರವರು ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು
ಆದಿ ಚುಂಚನಗಿರಿ ಮಹಾಸಂಸ್ಥಾನದ ಡಾ.ಧರ್ಮಪಾಲನಾಥ ಸ್ವಾಮೀಜಿ ಯವರು ಆಶೀರ್ವಚನ ನೀಡಿದರು.
ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ದೀಪ ಪ್ರಜ್ವಲಿಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಕೆ.ವಿ.ಚಿದಾನಂದ ರವರು ಮಂದಿರಕ್ಕೆ ನೂತನವಾಗಿ ನಿರ್ಮಿಸಿರುವ ಮಹಾದ್ವಾರದ ಉದ್ಘಾಟನೆಯನ್ನು ನೆರವೇರಿಸಿದರು.
ಮಧ್ವಾದೀಶ ವಿಠಲದಾಸ ನಾಮಾಂಕಿತ ದಾಸ ಸಂಕೀರ್ತನಕಾರ ರಾಮಕೃಷ್ಣ ಕಾಟುಕುಕ್ಕೆ ಯವರು ಧಾರ್ಮಿಕ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಪ್ರಧಾನ ಕಾರ್ಯದರ್ಶಿ ನಾರಾಯಣ ಕೇಕಡ್ಕ, ಕೋಶಾಧಿಕಾರಿ ಡಾ.ಲೀಲಾಧರ ಡಿ.ವಿ, ಆರ್ಥಿಕ ಸಮಿತಿ ಸಂಚಾಲಕ ಅಶೋಕ ಪ್ರಭು ಸುಳ್ಯ ರವರು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಮಿತಿ ಸದಸ್ಯೆ ಆರತಿ ಪುರುಷೋತ್ತಮ ಪ್ರಾರ್ಥಿಸಿದರು.ಧರ್ಮ ದರ್ಶಿ ಮಂಡಳಿಯ ಸದಸ್ಯ ಅಶೋಕ ಪ್ರಭು ಸ್ವಾಗತಿಸಿದರು. ಪ್ರ.ಕಾರ್ಯದರ್ಶಿ ನಾರಾಯಣ ಕೇಕಡ್ಕ ಪ್ರಾಸ್ತಾವಿಕ ಮಾತನಾಡಿದರು.
ಸಮಿತಿ ಜತೆ ಕಾರ್ಯದರ್ಶಿ ವಾಸುದೇವ ನಾಯಕ್ ವಂದಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಬೂಡು ರಾಧಾಕೃಷ್ಣ ರೈ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಜತೆ ಕಾರ್ಯದರ್ಶಿ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.