ಜಾಲ್ಸೂರು ಗ್ರಾ.ಪಂ.ಗೆ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ

0

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ (ನರೇಗ) ಕಾಮಗಾರಿ ಪೂರ್ಣಪ್ರಮಾಣದಲ್ಲಿ ಅನುಷ್ಠಾನ ಮಾಡಿ ಸುಳ್ಯ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದುದುದಕ್ಕಾಗಿ 2023-24ನೇ ಸಾಲಿನ ಶಿವರಾಮ ಕಾರಂತ ಪ್ರಶಸ್ತಿಯನ್ನು ಇತ್ತೀಚೆಗೆ ಪ್ರದಾನ ಮಾಡಲಾಯಿತು.

ಉಡುಪಿ ತಾಲೂಕಿನ ಕೋಟದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ತಿರುಮಲೇಶ್ವರಿ ಮರಸಂಕ, ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ , ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೆ.ಪಿ. ಸುಬ್ಬಯ್ಯ, ಕಾರ್ಯದರ್ಶಿ ಸುಂದರ ಮುಪ್ಪೇರ್ಯ, ಸದಸ್ಯರುಗಳಾದ ಶಿವಪ್ರಸಾದ್ ನೀರಬಸಿರು, ಈಶ್ವರ ನಾಯ್ಕ ಸೋಣಂಗೇರಿ, ಶ್ರೀಮತಿ ಅಂಬಿಕಾ ಕುಕ್ಕಂದೂರು, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಶ್ರೀಮತಿ ದೀಪ ಅಜಕಳಮೂಲೆ, ಮಾಜಿ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಶ್ರೀಮತಿ ಲೀಲಾವತಿ ವಿನೋಬನಗರ ಕೆ.ಎಂ. ಬಾಬು ಕದಿಕಡ್ಕ ಹಾಗೂ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.