ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಕಾಲಾವಧಿ ಜಾತ್ರಾಮಹೋತ್ಸವದ ಸಡಗರ

0

ಹನುಮ ನೇಮೋತ್ಸವ – ಗುಳಿಗರಾಜ ದೈವದ ಕೋಲ – ದೈವ -ದೇವರ ಭೇಟಿ

ಜಾಲ್ಸೂರು ಗ್ರಾಮದ ಅಡ್ಕಾರಿನ ಮಾಯಿಲಕೋಟೆ ಅಂಜನಾದ್ರಿಯ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಕಾಲಾವಧಿ ಜಾತ್ರಾಮಹೋತ್ಸವವು ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರ ಮಾರ್ಗದರ್ಶನದಲ್ಲಿ ಜರುಗುತ್ತಿದೆ.

ಫೆ.27ರಂದು ಬೆಳಿಗ್ಗೆ ಶ್ರೀ ದೇವರಿಗೆ ಸೀಯಾಳ ಅಭಿಷೇಕ, ಪಂಚಾಮೃತ ಅಭಿಷೇಕ, ಪವಮಾನ ಅಭಿಷೇಕ ನಡೆಯಿತು. ಬಳಿಕ ದೀಪ ಪ್ರತಿಷ್ಠೆಯೊಂದಿಗೆ ಆಹ್ವಾನಿತ ತಂಡಗಳಿಂದ ಅಹ:ಪೂರ್ಣ ಭಜನಾ ಕಾರ್ಯಕ್ರಮ ನೆರವೇರಿತು.

ಪೂರ್ವಾಹ್ನ ಶ್ರೀ ಗುಳಿಗರಾಜ ಸನ್ನಿಧಿಯಲ್ಲಿ ದೇವಕ್ರಿಯಾ ತಂಬಿಲ ಸೇವೆ, ಶ್ರೀ ದೇವರಿಗೆ ಮಹಾಪೂಜೆ, ಬ್ರಹ್ಮಸಂತರ್ಪಣೆ, ಅನ್ನದಾನ ಜರುಗಿತು.

ಅಪರಾಹ್ನ ಇಳಂತಾಜೆ ತರವಾಡಿನಲ್ಲಿ ವೀಳ್ಯ ನೀಡಿ ಹನುಮ ದೈವದ ಭಂಡಾರ ತರಲಾಯಿತು. ಸಂಜೆ ಭಜನಾ ಕಾರ್ಯಕ್ರಮದ ಮಗಳಂ ನಡೆದು,ರಾತ್ರಿ ಗುಳಿಗರಾಜ ದೈವದ ಭಂಡಾರ ತೆಗೆದು ಶ್ರೀ ಆಂಜನೇಯ ಸ್ವಾಮಿಯ ಅಂಗಣಪ್ರವೇಶ, ಶ್ರೀ ಹನುಮ ನೇಮೋತ್ಸವ ನಡೆಯಿತು.

ಬಳಿಕ ಗುಳಿಗರಾಜ ದೈವದ ಕೋಲ, ಶ್ರೀ ದೇವರಿಗೆ ಅಲಂಕಾರ ಪೂಜೆ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ಕಟ್ಟೆಪೂಜೆ, ದರ್ಶನಬಲಿ, ದೈವ – ದೇವರ ಭೇಟಿ, ಬಟ್ಟಲುಕಾಣಿಕೆ, ಶ್ರೀಮುಡಿ ಗಂಧಪ್ರಸಾದ ವಿತರಣೆ ಜರುಗಿತು.


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಶಿವರಾಮ ರೈ ಕುರಿಯ ಸೇರಿದಂತೆ ಆಡಳಿತ ಸಮಿತಿಯ ಪದಾಧಿಕಾರಿಗಳು, ಸೇವಾ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ಭಜನಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.