ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ರಿಂದ ಪ್ರದಾನ
ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ೨೦೨೩ರಲ್ಲಿ ನಡೆಸಿದ ಎಂ.ಡಿ.ಎಸ್ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮೊದಲ ಸ್ಥಾನಿಯಾಗಿದ್ದು, ಅವರಿಗೆ ಫೆ. ೨೭ರಂದು ಬೆಂಗಳೂರಿನ ನಿಮ್ಹಾನ್ಸ್ ಸಮಾವೇಶ ಕೇಂದ್ರದಲ್ಲಿ ನಡೆದ ೨೬ನೇ ವಾರ್ಷಿಕ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಕರ್ನಾಟಕದ ರಾಜ್ಯಪಾಲ, ವಿಶ್ವ ವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್‌ರವರು ಚಿನ್ನದ ಪದಕ ಪ್ರದಾನ ಮಾಡಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಆರ್. ಪಾಟೀಲ, ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಂ.ಕೆ. ರಮೇಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಎಂ.ಡಿ.ಎಸ್ ಪದವಿ ಪೂರೈಸಿದ್ದ ಇವರು, ಐವರ್ನಾಡು ಗ್ರಾಮದ ಬಿರ್ಮುಕಜೆ ಸುಧಾಕರ ಗೌಡ ಮತ್ತು ಉದಯಗೌರಿ ದಂಪತಿಗಳ ಪುತ್ರ. ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಬಿಡಿಎಸ್ ಪದವಿ ಪಡೆದಿದ್ದರು.ಪ್ರಸ್ತುತ ಇವರು ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಹಿರಿಯ ಉಪನ್ಯಾಸಕರಾಗಿ ಕರ್ತವ್ಯ ಸಲ್ಲಿಸುತ್ತಿದ್ದು, ಜಾಲ್ಸುರಿನ ಎನ್.ಇ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಸ್ಮೈಲ್ ವಿಜ಼್ ಎಂಬ ದಂತ ಚಿಕಿತ್ಸಾಲಯವನ್ನು ನಡೆಸುತ್ತಿದ್ದಾರೆ.