ಪ್ರಶ್ನಿಸುವ ಮತ್ತು ಗಮನಿಸುವುದರ ಮೂಲಕ ವಿಜ್ಞಾನ ಕಲಿಯಬೇಕು : ಜಯಲಕ್ಷ್ಮಿ ದಾಮ್ಲೆ

0

  "ನಮ್ಮ ನಿತ್ಯ ಜೀವನದಲ್ಲಿ ವಿಜ್ಞಾನ ಹಾಸುಹೊಕ್ಕಾಗಿದೆ. ಗಮನಿಸುವುದರ ಮೂಲಕ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು" ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾ ಯಿನಿ  ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಅವರು ಹೇಳಿದರು.

ಅವರು ಫೆ. 28ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ, ನಡೆದ ಅಂತಾರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

   ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಮ್ಮ ಶಾಲಾ ವಿಜ್ಞಾನ ಶಿಕ್ಷಕಿ ಶ್ರೀಮತಿ ಅಮೃತಾ ಕೆ  ಇವರು ಮಾತನಾಡಿ ವಿಜ್ಞಾನಿ ಸರ್ ಸಿ. ವಿ ರಾಮನ್ ಅವರು ವಿಜ್ಞಾನಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಮಾತನಾಡಿ "ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಸ್ಥಳೀಯ "ತಂತ್ರಜ್ಞಾನ ಗಳು " ಎಂಬ ಗುರಿಯನ್ನು ಇಟ್ಟುಕೊಂಡು ಈ ವರ್ಷದ ವಿಜ್ಞಾನ ದಿನಾಚಾರಣೆಯನ್ನು                     ಆಚರಿಸಲಾಗುತ್ತಿದೆ ಎಂಬುದನ್ನು ಹೇಳಿದರು.

ಕೇವಲ ಅಂಕೆಗಳಿಕೆಗಾಗಿ ಮಾತ್ರ ವಿಜ್ಞಾನವನ್ನು ಕಲಿಯದೇ, ನಮ್ಮ ಸುತ್ತಮುತ್ತಲಿನ ಆಗುಹೋಗುಗಳನ್ನು ಅರಿತುಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮವನ್ನು ನಮ್ಮ ಶಾಲಾ ಇನ್ನೊರ್ವ ವಿಜ್ಞಾನ ಶಿಕ್ಷಕಿ ಶ್ರೀಮತಿ ಪ್ರತಿಮಾಕುಮಾರಿ ಕೆ ಎಸ್ ಇವರು ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರತಿಜ್ಞಾ ವಿಧಿ ಬೋಧಿಸಿ, ಕಾರ್ಯಕ್ರಮ ನಿರೂಪಿಸಿದರು.