ಗ್ರಾ.ಪಂ. ನೌಕರರು ಸರಕಾರಕ್ಕೆ ಹಲವು ಬೇಡಿಕೆಗಳನ್ನಿಟ್ಟು, ಬೇಡಿಕೆ ಈಡೇರುವ ತನಕ ಮಾ. 1ರಿಂದ ಅನಿರ್ದಿಷ್ಟಾವಧಿಯ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ತೋಳಿಗೆ ಕಪ್ಪು ಪಟ್ಟಿ ತಮ್ಮ ಕರ್ತವ್ಯ ನಿರ್ವಹಿಸಲಿದ್ದಾರೆ. ಪ್ರತಿಭಟನೆಯಿಂದ ಸಾರ್ವಜನಿಕ ಕೆಲಸಕ್ಕೆ ಯಾವುದೇ ತೊಂದರೆಯಾಗುವುದಿಲ್ಲೆಂದು ಪಂಚಾಯತ್ ನೌಕರರ ಸಂಘದ ಜಿಲ್ಲಾಧ್ಯಕ್ಷ ದಯಾನಂದ್ ಮಠತಡ್ಕ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ನಲ್ಲಿ ಸೇವೆ ಸಲ್ಲಿಸುತ್ತಾ ಹಲವು ವರ್ಷಗಳಿಂದ ಸಂಘಟನೆಯ ಮೂಲಕ ಬೇಡಿಕೆಗಳನ್ನು ಇಲಾಖೆಗೆ ಸಲ್ಲಿಸುತ್ತ ಬಂದಿದ್ದರೂ ಸರಕಾರ ಬೇಡಿಕೆ ಈಡೇರಿಸದೇ ಆರೋಗ್ಯ ಮತ್ತು ಸೇವಾ ಭದ್ರತೆ ಇಲ್ಲದೆ ಒತ್ತಡದಿಂದ ಕಾರ್ಯ ನಿರ್ವಹಿಸುವಂತಾಗಿದೆ. ಬೇಡಿಕೆ ಈಡೇರಿಸುವರೆಗೆ ಕಛೇರಿಯ ಸಮಯದಲ್ಲಿ ಸೇವೆಯನ್ನು ನೀಡುತ್ತಾ ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಲಿದ್ದೇವೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.