ಮುರುಳ್ಯ ಶಾಂತಿನಗರ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಗಣಿತ ಮೆಟ್ರಿಕ್ ಮೇಳ ಫೆ. 28ರಂದು ನಡೆಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ನಡುಬೈಲುರವರು ಸಭಾಧ್ಯಕ್ಷತೆ ವಹಿಸಿ ವಿವಿಧ ಜಾಲಾಕೃತಿಯಿಂದ ಘನಾಕೃತಿಗಳನ್ನು ರಚಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಬೇಬಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸೀತಾ, ಸಹ ಶಿಕ್ಷಕಿ ಶ್ರೀಮತಿ ಉಷಾ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸೀತಾ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಪ್ರತಿಜ್ಞಾವಿಧಿಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಅನೇಕ ವಿದ್ಯಾರ್ಥಿಗಳು ಗಣಿತ ಶಾಸ್ತ್ರಜ್ಞರು ಹಾಗೂ ವಿಜ್ಞಾನಿಗಳ ಬಗ್ಗೆ ಕಿರು ಪರಿಚಯವನ್ನು ನೀಡಿದರು. ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಮಾದರಿಯ ವಿಜ್ಞಾನ ಪ್ರಯೋಗಗಳನ್ನು ನಡೆಸಲಾಯಿತು. ಶಾಲಾ ಶಿಕ್ಷಕ ವೃಂದ, ಎಸ್ ಡಿ ಎಮ್ ಸಿ ಸದಸ್ಯರು, ಮಕ್ಕಳ ಪೋಷಕರು, ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು ಹಾಗೂ ಊರವರ ಸಹಕಾರದೊಂದಿಗೆ ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಶಾಲಾ ಸಹ ಶಿಕ್ಷಕಿಯಾದ ಶ್ರೀಮತಿ ಉಷಾ ವಂದಿಸಿದರು.