ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಮಾ. 3ರಂದು ಭೇಟಿ ನೀಡಿ ಮಂತ್ರಾಕ್ಷತೆ ನೀಡಿದರು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ ಶೀಘ್ರವಾಗಿ ರಾಜರಾಜೇಶ್ವರಿ ದೇವಿ ರಾರಾಜಿಸಲೆಂದು ಶುಭ ಹಾರೈಸಿದರು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಮತ್ತು ಪದಾಧಿಕಾರಿಗಳು ಹಾಗೂ ಸದಸ್ಯರು, ಚೊಕ್ಕಾಡಿ ಶ್ರೀ ರಾಮ ದೇವಾಲಯದ ಶ್ರೀರಾಮ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಚೂಂತಾರು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.