ಪಾಂಬಾರು : ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೃತ್ಯು

0

ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸುಳ್ಯದ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ವಿದ್ಯಾರ್ಥಿನಿ ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದರು. ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.


ಮೃತಪಟ್ಟ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ .ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತ ವಿದ್ಯಾರ್ಥಿನಿ ತಂದೆ ತಾಯಿ ಮತ್ತು ಓರ್ವ ಸಹೋದರರನ್ನು ಅಗಲಿದ್ದಾರೆ.