ಸಂಪಾಜೆ: ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಾರ್ಮಿಕ ಕುಟುಂಬಕ್ಕೆ ಉಚಿತ ಆರೋಗ್ಯ ತಪಾಸಣೆ

0

ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಾರ್ಮಿಕ ಕುಟುಂಬಕ್ಕೆ ಉಚಿತ ಅರೋಗ್ಯ ತಪಾಸಣಾ ಕಾರ್ಯಕ್ರಮವು ಮಾ.5ರಂದು ಸಂಪಾಜೆ ಗ್ರಾ.ಪಂ.‌ಸಭಾಭವನದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ಅವರು ಅಧ್ಯಕ್ಷತೆ ವಹಿಸಿದ್ದರು.


ಪಂಚಾಯತ್ ಅಭಿವೃದ್ಧಿ ಅದಿಕಾರಿ ಶ್ರೀಮತಿ ಸರಿತಾ ಡಿಸೋಜಾ, ಸ್ವಾಗತಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಎಸ್. ಕೆ. ಹನೀಫ್ ಅವರು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಾರ್ಮಿಕ ಕುಟುಂಬಕ್ಕೆ ಆರೋಗ್ಯ ಇಲಾಖೆಯ ವತಿಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಸದಸ್ಯರಾದ ಸುಂದರಿ ಮುಂಡಡ್ಕ. ಮಾಜಿ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ. ಸದಸ್ಯೆ ವಿಮಲಾ ಪ್ರಸಾದ್, ಕಾರ್ಮಿಕ ಇಲಾಖೆಯ ಕೋ ಒರ್ಡಿನೆಟರ್ ಪ್ರಸಾದ್, ಇಲಾಖೆಯ ಅಧಿಕಾರಿಗಳು, ಕಾರ್ಮಿಕ ಮುಖಂಡ ಪ್ರಸಾದ್. ಮೊದಲದವರು ಉಪಸ್ಥಿತರಿದ್ದರು.