ಮೂಲಭೂತ ಸೌಕರ್ಯಗಳ ಬಗ್ಗೆ ಸುದೀರ್ಘ ಚರ್ಚೆ
ಬೆಳ್ಳಾರೆ ಗ್ರಾಮ ಪಂಚಾಯತ್ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನಮಿತ ಎಲ್.ರೈ ಯವರ ಅಧ್ಯಕ್ಷತೆಯಲ್ಲಿ ಮಾ.05ರಂದು ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.
ಯುವ ಜನ ಸೇವಾ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ ನೋಡೆಲ್ ಅಧಿಕಾರಿಯಾಗಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ರವರು ವರದಿ ಮಂಡಿಸಿದರು.
ಮೂಲಭೂತ ಸೌಕರ್ಯ,ಕಸ ವಿಲೇವಾರಿ ಶುಲ್ಕ ಸಂಗ್ರಹ,ಸ್ಮಶಾನ,ಅಂಬೇಡ್ಕರ್ ಭವನ,ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆಗಳು ನಡೆಯಿತು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ ಮೂಡಾಯಿತೋಟ,ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದು ಇಲಾಖಾ ಮಾಹಿತಿ ನೀಡಿದರು.