ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ೨೦೨೨-೨೩ನೇ ಸಾಲಿನಲ್ಲಿ ನಡೆದ ಎಂ.ಟೆಕ್ ಪರೀಕ್ಷೆಯಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆಗೈದಿದ್ದಾರೆ. ಎಂ.ಟೆಕ್: ಡಿಜಿಟಲ್ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸಹನ ಎಸ್.ಎಂ. ೨ನೇ ರ್‍ಯಾಂಕ್, ಎಂ.ಟೆಕ್ ಕನ್‌ಸ್ಟ್ರಕ್ಷನ್ ಟೆಕ್ನಾಲಜಿ – ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ನಿಸರ್ಗ ವೈ.ಕೆ. 2 ನೇ ರ್‍ಯಾಂಕ್ ಹಾಗೂ ಎಂ.ಟೆಕ್: ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಆಶಿಕ ಕೆ.ಸಿ. ೪ನೇ ರ್‍ಯಾಂಕ್‌ನ್ನು ವಿ.ಟಿ.ಯು ಘಟಿಕೋತ್ಸವದಲ್ಲಿ ಪಡೆದುಕೊಂಡಿರುತ್ತಾರೆ.
ಇವರನ್ನು ಡಾ. ರೇಣುಕಾಪ್ರಸಾದ್ ಕೆ.ವಿ., ಚೇರ್‌ಮೆನ್, ಕಾಲೇಜು ಆಡಳಿತ ಮಂಡಳಿ ಕಮಿಟಿ ಬಿ, ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಉಜ್ವಲ್ ಊರುಬೈಲು, ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್. ಹಾಗೂ ಸಿಬ್ಬಂಧಿ ವರ್ಗದವರು ಅಭಿನಂದಿಸಿರುತ್ತಾರೆ ಹಾಗೂ ರ್‍ಯಾಂಕ್ ವಿಜೇತರು ಪ್ರತಿಷ್ಠಿತ ಕೆ.ವಿ.ಜಿ. ಚಿನ್ನದ ಪದಕವನ್ನು ಪಡೆಯಲಿದ್ದಾರೆ.