ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

0

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಗಣೇಶ್ ಯುವ ಬಳಗ, ಕೊಯನಾಡು ಇದರ ಆಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಕ್ರೀಡೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವು ಮಾ.8ರಂದು ಕೊಯನಾಡಿನ ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಮಹಾಶಿವರಾತ್ರಿ ಪ್ರಯುಕ್ತ ದೇವಸ್ಥಾನದ ಮಾಜಿ ಅಧ್ಯಕ್ಷ ಉಲ್ಲಾಸ್ ಕೇನಾಜೆ ಅವರು ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಗಣೇಶ ಯುವ ಬಳಗದ ಅಧ್ಯಕ್ಷ ಹರ್ಷಿತ್, ಉಪಾಧ್ಯಕ್ಷ ಜಯಂತ ಪೆಲತಡ್ಕ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.
ರಾತ್ರಿ ನಡೆದ ಸಭಾ ಕಾರ್ಯಕ್ರಮದದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಪಿ. ಡಿ. ವಿಶ್ವನಾಥ ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಸಂಪಾಜೆ ಠಾಣಾ ಎ.ಎಸ್.ಐ. ಸುಂದರ ಸುವರ್ಣ, ಕೊ.ಸಂಪಾಜೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ,ಕೊಯನಾಡು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹಂಸಕಲಾ, ಶ್ರೀ ಗಣೇಶ ಯುವ ಬಳಗದ ಅಧ್ಯಕ್ಷ ಲೋಕೇಶ್,
ಮಾಜಿ ಅಧ್ಯಕ್ಷ ಕೃಷ್ಣ ಉಪಸ್ಥಿತರಿದ್ದರು
ಶ್ರೀಮತಿ ನಳಿನಾಕ್ಷಿ, ಕಲ್ಲಡ್ಕ ಅವರು ಧಾರ್ಮಿಕ ಉಪನ್ಯಾಸ ನೀಡಿದರು.

ಈ ವೇಳೆ ಮಾಜಿ ಅರ್ಚಕ ಪ್ರಭಾಕರ ಭಟ್, ಎಸ್ಸೆಸ್ಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಕು. ಭವ್ಯಶ್ರೀ, ಅಂಗಾರ ಕೊಯನಾಡು, ಜಯರಾಮ ಚೌಟಾಜೆ ಅವರನ್ನು ಸನ್ಮಾನಿಸಲಾಯಿತು.
ಜಯರಾಮ ಚೌಟಾಜೆ ಅವರು ನೀರಿನ ಫಿಲ್ಟರನ್ನು ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಿದರು.
ನಂತರ ಸಾರ್ವಜನಿಕರಿಗಾಗಿ ನಡೆಸಿದ ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ದಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಜಗದೀಶ್ ಪರಮಲೆ ಮತ್ತು ಯಶೋಧರ ಬಿ. ಜೆ ಕಾರ್ಯಕ್ರಮ ನಿರೂಪಿಸಿದರು.
ಬಾಲಕೃಷ್ಣ ಕೊಯನಾಡು ಸ್ವಾಗತಿಸಿ, ಯಶೋಧರ ಬಿ.ಜೆ. ವಂದಿಸಿದರು. ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.