ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಮರಾಟಿ ಯುವ ವೇದಿಕೆಯ ಸಹಯೋಗದೊಂದಿಗೆ ಮಹಿಳಾ ವೇದಿಕೆಯ ವತಿಯಿಂದ ಮಹಿಳಾ ದಿನಾಚರಣೆ ಮಾ. 10ರಂದು ಸುಳ್ಯದ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘ ಗಿರಿದರ್ಶಿನಿಯಲ್ಲಿ ನಡೆಯಿತು.
ಮಹಿಳಾ ವೇದಿಕೆಯ ಅಧ್ಯಕ್ಷ ಶ್ರೀಮತಿ ಗಿರಿಜಾ ಜನಾರ್ಧನ ನಾಯ್ಕ್ ಕೊಡಿಯಾಲಬೈಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಜನಾರ್ಧನ್ ಬಿ. ಕುರುಂಜಿಭಾಗ್, ಸ್ಥಾಪಕಾಧ್ಯಕ್ಷ ಜಿ. ದೇವಪ್ಪ ನಾಯ್ಕ್, ಯುವ ವೇದಿಕೆಯ ಅಧ್ಯಕ್ಷ ಮೋಹನ್ ಪೆರಾಜೆ ಅತಿಥಿಗಳಾಗಿ ಭಾಗವಹಿಸಿದ್ದರು. ಸುಳ್ಯ ಗಾಂಧಿನಗರ ಜೂನಿಯರ್ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರೇಮಾ ಮತ್ತು ನಿವೃತ್ತ ಶಿಕ್ಷಕಿ ಶ್ರೀಮತಿ ಇಂದಿರಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಹಿಳಾ ದಿನಾಚರಣೆಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು. ಮಹಿಳಾ ವೇದಿಕೆಯ ಕಾರ್ಯದರ್ಶಿ ಶ್ರೀಮತಿ ಕುಸುಮಾ ಜನಾರ್ಧನ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಮಹಿಳಾ ವೇದಿಕೆಯ ಉಪಾಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಸುಬ್ರಾಯ ನಾಯ್ಕ್ ಭಸ್ಮಡ್ಕ ಸ್ವಾಗತಿಸಿದರು. ಶ್ರೀಮತಿ ಶೋಭ ಬೆಳ್ಳಾರೆ ಮತ್ತು ಶ್ರೀಮತಿ ರೇವತಿ ದೊಡ್ಡೇರಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸವಿತಾ ಸುಭಾಷ್ ವಂದಿಸಿದರು.