ಪೇರಾಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪುನಶ್ಚೇತನ ಸಮಿತಿ ರಚನೆ

0

ಮಾ.10ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿ ಹಿರಿಯ ವಿದ್ಯಾರ್ಥಿಗಳ ಹಾಗೂ ವಿದ್ಯಾಭಿಮಾನಿಗಳ ಸಭೆ ನಡೆಯಿತು.

ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ತಿಲಕ ಕುತ್ಯಾಡಿ, ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಸುಶೀಲ ಕೆ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದೇವದಾಸ್ ಕುಕ್ಕುಡೇಲು,
ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಚಂದ್ರಶೇಖರ ಪೇರಾಲು, ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ನಾರಾಯಣ ಮಣಿಯಾಣಿ, ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯರು , ಪುನಶ್ಚೇತನ ಸಮಿತಿಯ ಅಧ್ಯಕ್ಷ ರಾಜೇಶ್ ನೀರ್ಪಾಡಿ , ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇಲ್ಲಿಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಬ್ರಹ್ಮಣ್ಯ ಕೆ.ಎನ್. ನೇತೃತ್ವದಲ್ಲಿ ಹಿರಿಯ ವಿದ್ಯಾರ್ಥಿಗಳ ಮತ್ತು ವಿದ್ಯಾಭಿಮಾನಿಗಳ ಸಭೆ ನಡೆಯಿತು.

ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶಾಲಾ ಪುನಶ್ಚೇತನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಊರಿನ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನ ಮಹನೀಯರು ಸಭೆಯಲ್ಲಿ ಭಾಗವಹಿಸಿದ್ದರು.

ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ ಶಿಲ್ಪಾ ಗಾಣಿಗ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಲತಾಶ್ರೀ ಎಸ್‌.ಕೆ. ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ನಮ್ಯಾ ಎ. ಸಹಕರಿಸಿದರು.