ನಾಗಪಟ್ಟಣ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ- ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

0

ಶಿವನ ಆರಾಧನೆ ಮಾಡುವ ಭಗವದ್ಭಕ್ತರಿಗೆ ನೆಮ್ಮದಿಯ ಬದುಕು ಪ್ರಾಪ್ತಿಯಾಗುವುದು. ದೇವಾಲಯದ ಆಚಾರ ವಿಚಾರಗಳ ಕುರಿತು ಅಧ್ಯಾತ್ಮ ಚಿಂತಕರ ಉಪನ್ಯಾಸದಿಂದ ಪಡೆದುಕೊಳ್ಳಲು ಸಾಧ್ಯವಿದೆ- ಭಾಗೀರಥಿ ಮುರುಳ್ಯ

ಆಲೆಟ್ಟಿ ಗ್ರಾಮದ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಮಾ.11 ರಂದು ಆರಂಭಗೊಂಡಿತು.
ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ಉಷಾ ಪೂಜೆಯಾಗಿ ಗಣಪತಿ ಹವನ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಅಪರಾಹ್ನ ಭಜನಾ ಕಾರ್ಯಕ್ರಮ ನಡೆದು ತಂತ್ರಿಗಳ ಆಗಮನವಾಗಿ ಸಾಮೂಹಿಕ ಪ್ರಾರ್ಥನೆ ಯಾಗಿ ವೈದಿಕ ಕಾರ್ಯಕ್ರಮ ನಡೆಯಿತು.

ಧಾರ್ಮಿಕ ಸಭೆ- ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ:

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆಯು ನಡೆಯಿತು.
ಸುಳ್ಯದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.
ಮುಖ್ಯ ಅಭ್ಯಾಗತರಾಗಿ ಗುಂಡ್ಯ ಮಾಡಾರಮನೆ ಉಳ್ಳಾಕುಲು ದೈವಸ್ಥಾನದ ಅಧ್ಯಕ್ಷ ಕೆ.ಅಶೋಕ ಪ್ರಭು ಸುಳ್ಯ, ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾವಸಂತ ಆಲೆಟ್ಟಿ, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಮಲ ನಾಗಪಟ್ಟಣ, ಪಂಚಾಯತ್ ಸದಸ್ಯೆ ಶ್ರೀಮತಿ ಮೀನಾಕ್ಷಿ, ಸುಳ್ಯ ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕ ಗಿರಿಜಾ ಶಂಕರ ತುದಿಯಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯ ರಾಧಾಕೃಷ್ಣ ಕೋಲ್ಚಾರು, ಬಿ.ಬಾಬು ಗೌಡ ಕಡೆಂಗ, ಸುಧಾಮ ಆಲೆಟ್ಟಿ,ತಂಗವೇಲು ನಾಗಪಟ್ಟಣ, ಶ್ರೀಮತಿ ವಿಜಯಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕು.ಸಹಾರಿಕಾ ಪ್ರಾರ್ಥಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ಸುಧಾಮ ಆಲೆಟ್ಟಿ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಸದಸ್ಯ ರಾಧಾಕೃಷ್ಣ ಕೋಲ್ಚಾರು ವಂದಿಸಿದರು.
ಎ.ಕೆ ಮೋಹನ ಅರಂಬೂರು ಕಾರ್ಯಕ್ರಮ ನಿರೂಪಿಸಿದರು.
ಸ್ಥಳೀಯ ಅಂಗನವಾಡಿ ಮಕ್ಕಳಿಂದ ಹಾಗೂ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನವಾಯಿತು. ಕಲಾವಿದ ಶ್ಯಾಮ್ ಕಲ್ಲಡ್ಕ ಬಂಟ್ವಾಳ ರವರಿಂದ ಮಾಯಲೋಕ ಜಾದೂ ಪ್ರದರ್ಶನವಾಯಿತು. ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.